ನವದೆಹಲಿ : ಗಾನ ಕೋಗಿಲೆ  ಲತಾ ಮಂಗೇಶ್ಕರ್ (Lata Mangeshkar)  ಇಂದು  ಮುಂಬೈನಲ್ಲಿ ನಿಧನರಾಗಿದ್ದಾರೆ.  ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಕೇಂದ್ರ ಸರ್ಕಾರ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು (Two Day National Mourning) ಘೋಷಿಸಿದೆ. ಈ ಸಂದರ್ಭದಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಅರ್ಧ ಹಾರಿಸಲಾಗುವುದು. 


COMMERCIAL BREAK
SCROLL TO CONTINUE READING

ಭಾರತದಲ್ಲಿ 2 ದಿನಗಳ ರಾಷ್ಟ್ರೀಯ ಶೋಕಾಚರಣೆ :
ಭಾರತ ರತ್ನ ಲತಾ ಮಂಗೇಶ್ಕರ್ (Lata Mangeshkar)  ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ 2 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು (National Mourning) ಘೋಷಿಸಿದೆ. ರಾಷ್ಟ್ರೀಯ ಶೋಕಾಚರಣೆಯನ್ನು ಫೆಬ್ರವರಿ 6 ಮತ್ತು 7 ಫೆಬ್ರವರಿ 2022 ರಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ದೇಶದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧ ಮಾತ್ರ ಹಾರಿಸಲಾಗುವುದು.


Lata Mangeshkar: ಗಾಯನ ನಿಲ್ಲಿಸಿದ ಭಾರತ ರತ್ನ ಲತಾ ಮಂಗೇಶ್ಕರ್


ಪ್ರಧಾನಿ ಸಂತಾಪ :
ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ (Narendra Modi), 'ಲತಾ ದೀದಿ ಅವರಿಂದ  ಯಾವಾಗಲೂ ನಾನು ಅಪಾರ ಪ್ರೀತಿಯನ್ನು ಪಡೆದಿರುವುದು ಗೌರವದ ವಿಚಾರ ಎಂದಿದ್ದಾರೆ.  ಅವರೊಂದಿಗಿನ ನನ್ನ ಸಂಭಾಷಣೆ ಅವಿಸ್ಮರಣೀಯವಾಗಿರುತ್ತದೆ ಎಂದು ಹೇಳಿದ್ದಾರೆ. 


BARC Recruitment 2022: ಗ್ರೂಪ್ ಎ ಹುದ್ದೆಗಳಿಗೆ ವೃತ್ತಿಪರರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ  ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ