ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ರಾಜಕೀಯ ಕದನ ಬಿರುಸುಗೊಂಡಿದ್ದು, ರಾಜಕೀಯ ಪಕ್ಷಗಳು ಮತ್ತು ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಇತ್ತೀಚಿನ ಆರೋಪದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ (ಡಿಸೆಂಬರ್ 21) ತಮ್ಮ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. "ಫೋನ್ ಟ್ಯಾಪಿಂಗ್  (phone tapping) ಬಿಡಿ. ನನ್ನ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನೂ ಹ್ಯಾಕ್ ಮಾಡಲಾಗಿದೆ" ಎಂದು ಪ್ರಿಯಾಂಕಾ (Priyanka Gandhi Vadra) ಹೇಳಿದ್ದಾರೆ. 


ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆಪ್ರತಿಕ್ರಿಯಿಸಿದ ಅವರು, ಸರ್ಕಾರಕ್ಕೆ ಬೇರೆ ಕೆಲಸವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.


ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ದೂರವಾಣಿಗಳನ್ನು ಕದ್ದಾಲಿಕೆ ಮಾಡುತ್ತಿದ್ದಾರೆ ಮತ್ತು ಪ್ರತಿದಿನ ಸಂಜೆ ಅವರ ಸಂಭಾಷಣೆಗಳ ಧ್ವನಿಮುದ್ರಿಕೆಗಳನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಿದ ಎರಡು ದಿನಗಳ ನಂತರ ಕಾಂಗ್ರೆಸ್ ನಾಯಕಿ ಈ ಆರೋಪ ಮಾಡಿದ್ದಾರೆ. 


ಕಾಂಗ್ರೆಸ್‌ನ 'ಲಡ್ಕಿ ಹೂಂ, ಲಡ್ ಸಕ್ತಿ ಹೂ' ಅಭಿಯಾನದಿಂದಾಗಿ, ಪ್ರಧಾನಿ ಮಹಿಳೆಯರಿಗಾಗಿ ಕೆಲಸ ಮಾಡಬೇಕಾಗಿದೆ. ಪ್ರಧಾನಮಂತ್ರಿ ಮಹಿಳಾ ಶಕ್ತಿಯ ಮುಂದೆ ತಲೆಬಾಗಿದ್ದಾರೆ. ಇದು ಉತ್ತರ ಪ್ರದೇಶದ ಮಹಿಳೆಯರ ಗೆಲುವು ಎಂದು ಪ್ರಿಯಂಕಾ ಹೇಳಿದ್ದಾರೆ. 


ಇದನ್ನೂ ಓದಿ: Unseen Photos:ಎಂಎಸ್ ಧೋನಿ, ಪತ್ನಿ ಸಾಕ್ಷಿಯ ಅಪರೂಪದ ಚಿತ್ರಗಳು


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.