Pak leopard entering Indian territory : ಸಾಂಬಾ ಜಿಲ್ಲೆಯ ರಾಮಗಢ ಉಪ ವಲಯದಲ್ಲಿ ಚಿರತೆಯೊಂದು ಭಾರತ-ಪಾಕ್ ಗಡಿಯನ್ನು ದಾಟಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸುತ್ತಿರುವ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್‌ ಆಗಿದೆ. 


COMMERCIAL BREAK
SCROLL TO CONTINUE READING

ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಾಂಬಾದ ರಾಮಗಢ ಉಪ ವಲಯದಲ್ಲಿ ಪಾಕಿಸ್ತಾನದ ಕಡೆಯಿಂದ ಅಂತರಾಷ್ಟ್ರೀಯ ಗಡಿಯನ್ನು ದಾಟಿ ಚಿರತೆಯೊಂದು ಭಾರತದ ಪ್ರದೇಶಕ್ಕೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಗಡಿಯಲ್ಲಿ ನೆಲೆಸಿರುವ ಸ್ಥಳೀಯರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.


ಪಂಜಾಬಿನ ಭಿಂದ್ರನ್‌ವಾಲೇ 2.0: ಅಮೃತ್ ಪಾಲ್ ಸಿಂಗ್


ಈ ವಾರದ ಆರಂಭದಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಿಂಜೆವಾಡಿ ಇನ್ಫೋಟೆಕ್ ಪಾರ್ಕ್ ಪ್ರದೇಶದಲ್ಲಿ ಬೀದಿ ಚಿರತೆಯೊಂದು ಸಾಕು ನಾಯಿಯನ್ನು ಕೊಂದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಕು ನಾಯಿಯ ಮೇಲೆ ಪ್ರಾಣಿ ದಾಳಿ ಮಾಡುತ್ತಿರುವುದು ಕಂಡು ಬಂದಿತ್ತು. ಪುಣೆಯಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.