Leopard near Hyderabad airport : ಹೈದರಾಬಾದ್ ಹೊರವಲಯದ ಶಂಶಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಚಿರತೆಯೊಂದು ಕಾಣಿಸಿಕೊಂಡಿದೆ. ಅರಣ್ಯಾಧಿಕಾರಿಗಳು ಸೆರೆ ಹಿಡಿಯಲು ಬಲೆ, ಸಿಸಿಟಿವಿಗಳನ್ನು ಸಜ್ಜುಗೊಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಶಂಶಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಚಲನವಲನ ಸೆರೆಯಾಗಿದ್ದು, ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಹಿಡಿಯಲು ಮುಂದಾಗಿದೆ.


ಇದನ್ನು ಓದಿ : EPFO ಸದಸ್ಯರಿಗೆ ಉಚಿತವಾಗಿ ಸಿಗುತ್ತದೆ ಈ ಸೌಲಭ್ಯ, ಆದರೆ ನಿಯಮ ಗೊತ್ತಿರಲಿ!


ಅರಣ್ಯ ಸಿಬ್ಬಂದಿ ತಮ್ಮ ಕಾರ್ಯಾಚರಣೆಯ ಭಾಗವಾಗಿ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಿ ಮತ್ತು ಪಂಜರಗಳನ್ನು ಸಿದ್ಧಪಡಿಸಿದ್ದಾರೆ. 


ರಂಗಾ ರೆಡ್ಡಿ ಜಿಲ್ಲೆಯ ಶಂಶಾಬಾದ್ ಪುರಸಭೆ ವ್ಯಾಪ್ತಿಯ ಗೊಲ್ಲಪಲ್ಲಿ ಬಳಿಯ ವಿಮಾನ ದುರಸ್ತಿ ಕೇಂದ್ರದ ಬಳಿಯಿರುವ ವಿಮಾನ ನಿಲ್ದಾಣ ಪ್ರದೇಶದಲ್ಲಿ ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದೆ. ಸುತ್ತಮುತ್ತ ಇರುವ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳು ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.


ಇದನ್ನು ಓದಿ : Mouni Roy  : ಹಾಟ್ ಪೋಸ್ ನಲ್ಲಿಯೇ ಬೆಚ್ಚಿಬೀಳಿಸುವ ಕಣ್ಣೋಟದ ಬೆಡಗಿ 


ಅರಣ್ಯಾಧಿಕಾರಿಗಳು ವಿಮಾನ ನಿಲ್ದಾಣದ ಬಳಿ ಬಲೆ, ಸಿಸಿಟಿವಿ, ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಿ ಮತ್ತು ಪಂಜರಗಳನ್ನು ಇಟ್ಟು, ಅದನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.


ವಿಮಾನ ನಿಲ್ದಾಣದ ಗಡಿ ಗೋಡೆಯ ಮೇಲೆ ಚಿರತೆ ಜಿಗಿದಿದ್ದು, ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯಲ್ಲಿ ಅಲಾರಾಂ ಹೊಡೆದುಕೊಂಡಿದೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಅಧಿಕಾರಿಗಳು ಚಿರತೆ ಕಾಣಿಸಿಕೊಂಡ ಪ್ರದೇಶವನ್ನು ಗುರುತಿಸಿ ಅಲ್ಲಿಯೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.