ಕೋಲ್ಕತಾ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಮೊದಲು ಘೋಷಣೆ ಮಾಡಲಿ ಎಂದು ಬಿಜೆಪಿ ಸೋಮವಾರ ಸವಾಲು ಹಾಕಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಗ್ಗೂಡುತ್ತಿರುವುದು ಒಳ್ಳೆಯ ವಿಚಾರ. ಆದರೆ, ವಿರೋಧ ಪಕ್ಷಗಳು ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಎದುರಿಸಲಿರುವ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಮೊದಲು ಘೋಷಣೆ ಮಾಡಲಿ. ನಂತರ ಅವರು ನಮ್ಮನ್ನು ಸೋಲಿಸುವ ಕನಸು ಕಾಣಬಹುದು ಎಂದು ಹೇಳಿದ್ದಾರೆ. 


2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರಬಲ ಮೈತ್ರಿಕೂಟ ರಚಿಸುವ ಸಂಬಂಧ ವಿರೋಧ ಪಕ್ಷಗಳು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಭೆಯೊಂದನ್ನು ನಡೆಸುತ್ತಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಸಭೆಯ ನೇತೃತ್ವ ಅವರು ವಹಿಸಿಕೊಂಡಿದ್ದಾರೆ.