ಲಕ್ನೋ: ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಫ್ಲೈಓವರ್ ಭಾಗವು ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಸಂಸ್ಥೆ ANI ನೀಡಿರುವ ಮಾಹಿತಿ ಪ್ರಕಾರ ಈ ಘಟನೆಯು ಬಸ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 28 ರಲ್ಲಿ ಸಂಭವಿಸಿದೆ.



ಕೆಲವರು ಫ್ಲೈಓವರ್ ನ ಅವಶೇಷಗಳಡಿ ಸಿಲುಕಿರಬಹುದು ಎಂದು ಪ್ರಾಥಮಿಕ ವರದಿಗಳು ಶಂಕೆ ವ್ಯಕ್ತಪಡಿಸಿವೆ. ಜಿಲ್ಲಾಧಿಕಾರಿ ಮತ್ತು ಪೊಲೀಸರು ಅಪಘಾತ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.