ಗೋವಾದಲ್ಲಿ 1.5 ಕೋಟಿ ರೂ. ಮೌಲ್ಯದ ಮದ್ಯ ವಶ

ಗೋವಾದ ಮೂರು ಸ್ಥಳಗಳಲ್ಲಿ ದಾಳಿ ನಡೆಸಿ ದೊಡ್ಡ ಪ್ರಮಾಣದ ಮದ್ಯ ವಶಪಡಿಸಿಕೊಂಡ ಜಿಲ್ಲಾ ತನಿಖಾ ಘಟಕ (ಡಿಐಯು) ತಂಡ.

Last Updated : Mar 28, 2019, 12:03 PM IST
ಗೋವಾದಲ್ಲಿ 1.5 ಕೋಟಿ ರೂ. ಮೌಲ್ಯದ ಮದ್ಯ ವಶ title=
Representational Image

ಪಣಜಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಗೋವಾದ ಮೂರು ಸ್ಥಳಗಳಲ್ಲಿ ದಾಳಿ ನಡೆಸಿದ ಜಿಲ್ಲಾ ತನಿಖಾ ಘಟಕ (ಡಿಐಯು) ತಂಡವು ಬುಧವಾರ 1.5 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದೆ. 

ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ಧರ್ಗಲ್ ಮತ್ತು ಪ್ರೆನೆಮ್ ಸೇರಿದಂತೆ ಮೂರು ಸ್ಥಳಗಳಲ್ಲಿ ದಾಳಿ ನಡೆಸಿದ ಡಿಐಯು ತಂಡ ದೊಡ್ಡ ಪ್ರಮಾಣದ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ವಿಚಾರಣೆ ವೇಳೆ ಮದ್ಯದ ಹೊಂದಿದ್ದ ವ್ಯಕ್ತಿಗಳು ಯಾವುದೇ ಪರವಾನಗಿ ಅಥವಾ ಅದನ್ನು ಮಾರಾಟ ಮಾಡಲು ಅನುಮತಿ ಹೊಂದಿರುವ ದಾಖಲೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.

(With ANI inputs)
 

Trending News