Ahmedabad Plane Crash LIVE Update : ಅಹಮದಾಬಾದ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನವು ಟೇಕ್ ಆಫ್ ಆಗುವ ಸಮಯದಲ್ಲಿ ಪತನವಾಗಿದೆ. ವಿಮಾನ ಪತನವಾಗುತ್ತಿದ್ದ ಹಾಗೆಯೇ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ವಿಮಾನವು ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ಇದು 242 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು.










