ನವದೆಹಲಿ: ದೆಹಲಿ ಸರ್ಕಾರ ಕಾರ್ಮಿಕರಿಗೆ 5000 ರೂ.ಗಳ ಸಹಾಯ ನೀಡುವುದಾಗಿ ಮಂಗಳವಾರ ಹೈಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಒಂದು ವಾರದ ಲಾಕ್‌ಡೌನ್‌ ಘೋಷಣೆಯ ನಂತರ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ದೆಹಲಿಯಿಂದ ತಮ್ಮ ಮನೆಗಳಿಗೆ ಹಿಂತಿರುಗಲು ಪ್ರಾರಂಭಿಸಿದ್ದಾರೆ.


COMMERCIAL BREAK
SCROLL TO CONTINUE READING

ವಲಸೆ ಕಾರ್ಮಿಕರು :
ವಾಸ್ತವವಾಗಿ ಕರೋನಾವೈರಸ್ (Coronavirus) ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿಯಲ್ಲಿ ಒಂದು ವಾರದ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ದೆಹಲಿಯಲ್ಲಿ ಏಪ್ರಿಲ್ 20 ರಂದು ಪ್ರಾರಂಭವಾದ ಲಾಕ್‌ಡೌನ್ ಏಪ್ರಿಲ್ 26 ರವರೆಗೆ ಮುಂದುವರಿಯುತ್ತದೆ. ಆದರೆ ಈ ಲಾಕ್‌ಡೌನ್ ಮತ್ತಷ್ಟು ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಿರುವ ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಹಿಂದಿರುಗುತ್ತಿದ್ದಾರೆ. ದೆಹಲಿಯ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಇತರ ರಾಜ್ಯಗಳಿಂದ ಉದ್ಯೋಗ ಅರಸಿ ಬಂದಿದ್ದ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ತಮ್ಮ ನಾಡಿಗೆ ವಲಸೆ ಹೋಗುತ್ತಿರುವ ದೃಶ್ಯ ಕಂಡು ಬರುತ್ತಿದೆ. 


ಹೈಕೋರ್ಟ್ ಈ ಸೂಚನೆಗಳನ್ನು ನೀಡಿತು:
ರಾಜ್ಯದಲ್ಲಿ ಲಾಕ್‌ಡೌನ್ (Lockdown) ಜಾರಿಗೊಳಿಸುವುದರಿಂದ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅವರಿಗೆ ಅಗತ್ಯ ವಸ್ತುಗಳನ್ನು ಒದಗಿಸಬೇಕು ಎಂದು ಏಪ್ರಿಲ್ 19 ರಂದು ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಸರ್ಕಾರ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.


ಇದನ್ನೂ ಓದಿ - Coronavirus: ಈವರೆಗಿನ ಎಲ್ಲಾ ದಾಖಲೆ ಮುರಿದ ಕರೋನಾ ಸುನಾಮಿ


ಕೇಜ್ರಿವಾಲ್ ಸರ್ಕಾರದ ಆದೇಶದಂತೆ ದೈನಂದಿನ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ರಾಜಧಾನಿಯಲ್ಲಿ ಆಶ್ರಯ, ಆಹಾರ, ನೀರು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ತಿಳಿಸಿದೆ.


ದೆಹಲಿ ಸರ್ಕಾರ ಕಾರ್ಮಿಕರಿಗಾಗಿ ಸಮಿತಿ ರಚಿಸಲಿದೆ:
ದೆಹಲಿ ಸರ್ಕಾರದ (Delhi Govt) ಅಫಿಡವಿಟ್ ಪ್ರಕಾರ ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ 5000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಅದೇ ಸಮಯದಲ್ಲಿ, ವಲಸೆ ಕಾರ್ಮಿಕರನ್ನು ಗುರುತಿಸಲು ಮತ್ತು ಸಹಾಯ ಮಾಡಲು ಸಮಿತಿಯನ್ನು ರಚಿಸಲಾಗುತ್ತದೆ ಮತ್ತು ನಂತರ ಅವರಿಗೆ ಸಹಾಯ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ - "ರಾಜ್ಯಗಳಿಗೆ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ"


ವಲಸೆ ಕಾರ್ಮಿಕರಿಗಾಗಿ ರಚಿಸಲಾಗಿರುವ ಸಮಿತಿಯಲ್ಲಿ 7 ಸದಸ್ಯರಿರುತ್ತಾರೆ. ಇದರಲ್ಲಿ ಹಿರಿಯ ಅಧಿಕಾರಿಗಳನ್ನು ಸೇರಿಸಲಾಗುವುದು. ಕಾರ್ಮಿಕರ ಆರ್ಥಿಕ ಸಹಾಯದ ಜೊತೆಗೆ ಆಹಾರ ಮತ್ತು ಪಾನೀಯ, ವೈದ್ಯಕೀಯ ಸೌಲಭ್ಯಗಳು ಮತ್ತು ಆಶ್ರಯ ಇತ್ಯಾದಿ ವ್ಯವಸ್ಥೆಗಳನ್ನು ಸಮಿತಿ ನೋಡಿಕೊಳ್ಳಲಿದೆ.


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.