Lockdown Extended : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್‌ಡೌನ್‌ ವಿಸ್ತರಣೆ..!

ಕೊರೋನಾ ಪಾಸಿಟಿವ್‌ ಪ್ರಮಾಣ ಶೇ 2.5ಕ್ಕಿಂತ ಕಡಿಮೆಯಾಗಿದೆ. ಪ್ರಕರಣಗಳ ಸಂಖ್ಯೆ ಕೂಡ ಇಳಿಮುಖವಾಗಿವೆ, ಮೇ 31ರಿಂದ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ

Last Updated : May 23, 2021, 02:19 PM IST
  • ರಾಷ್ಟ್ರ ರಾಜಧಾನಿಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಮೇ 31ರ ವರೆಗೂ ವಿಸ್ತರಣೆ
  • ಸಿಎಂ ಅರವಿಂದ್ ಕೇಜ್ರಿವಾಲ್‌ ಹೇಳಿದ್ದಾರೆ
  • ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,600 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ
Lockdown Extended : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್‌ಡೌನ್‌ ವಿಸ್ತರಣೆ..! title=

ನವದೆಹಲಿ : ಕೊರೋನಾ ನಿಯಂತ್ರಣಕ್ಕಾಗಿ ರಾಷ್ಟ್ರ ರಾಜಧಾನಿಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಮೇ 31ರ ವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್‌ ಹೇಳಿದ್ದಾರೆ.

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,600 ಹೊಸ ಕೊರೋನಾ ಪ್ರಕರಣಗಳು(Corona Case) ದಾಖಲಾಗಿವೆ. ಕೊರೋನಾ ಪಾಸಿಟಿವ್‌ ಪ್ರಮಾಣ ಶೇ 2.5ಕ್ಕಿಂತ ಕಡಿಮೆಯಾಗಿದೆ. ಪ್ರಕರಣಗಳ ಸಂಖ್ಯೆ ಕೂಡ ಇಳಿಮುಖವಾಗಿವೆ, ಮೇ 31ರಿಂದ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Vaccination Fear In Village: ವ್ಯಾಕ್ಸಿನ್ ಭಯದಿಂದ ನದಿಗೆ ಹಾರಿದ ಗ್ರಾಮೀಣ ಜನ, ಲಸಿಕೆ ಹಾಕಿಸಿಕೊಂಡಿದ್ದು ಕೇವಲ 14 ಜನ ಮಾತ್ರ

ಹಲವು ಜನರನ್ನು ನಾನು ಸಂಪರ್ಕಿಸಿದ್ದೇನೆ ಹಾಗೂ ಬಹುತೇಕರು ಒಂದು ವಾರ ಲಾಕ್‌ಡೌನ್‌ ವಿಸ್ತರಣೆ(Lockdown Extended)ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಮೇ 31ರ ಬೆಳಿಗ್ಗೆ 5ರ ವರೆಗೂ ಲಾಕ್‌ಡೌನ್‌ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಡಿಮೆ ಬೆಲೆಗೆ ಫೋನ್ ಖರೀದಿಸಬೇಕೆ? ಇಲ್ಲಿದೆ Best options

ದೆಹಲಿ(Delhi)ಯಲ್ಲಿ ಕೊರೋನಾ ಲಸಿಕೆ ಲಭ್ಯತೆಗಾಗಿ ಲಸಿಕೆ ತಯಾರಿಕ ಕಂಪನಿಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಲಸಿಕೆಗಾಗಿ ಎಷ್ಟು ದುಡ್ಡು ಬೇಕಾದ್ರು ನೀಡಲು ಸಿದ್ಧರಿದ್ದೇವೆ, ಈಗಿರುವ ಪರಿಸ್ಥಿತಿಯನ್ನು ಉಳಿಸಿಕೊಳ್ಳಲು ಲಾಕ್‌ಡೌನ್‌ ಅವಶ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : CBSE 12 ತರಗತಿ ಪರೀಕ್ಷೆ ನಿರ್ಧಾರ ಬಗ್ಗೆ ರಾಜನಾಥ್ ನೇತೃತ್ವದಲ್ಲಿ ಸಭೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News