ಪಾಟ್ನಾ : ಕರೋನಾ (Coronavirus) ಹಿನ್ನೆಲೆಯಲ್ಲಿ ಬಿಹಾರದಲ್ಲಿ ಹೇರಲಾಗಿದ್ದ ಲಾಕ್‌ಡೌನ್ (Lockdown Extends in Bihar) ಅನ್ನು ವಿಸ್ತರಿಸಲಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜೂನ್ 8ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಇರಲಿದೆ.
ಟ್ವೀಟ್ ಮೂಲಕ ಮಾಹಿತಿ ನಿಡಿದ ಸಿಎಂ :
ಕರೋನಾ (Coronavirus) ಹಿನ್ನೆಲೆಯಲ್ಲಿ ಲಾಕ್‌ಡೌನ್ (Lockdown) ಅನ್ನು ಒಂದು ವಾರದವರೆಗೆ ಅಂದರೆ ಜೂನ್ 8ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ನಿತೀಶ್ ಕುಮಾರ್ (Nitish Kumar) ತಿಳಿಸಿದ್ದಾರೆ. ಆದರೆ ವ್ಯವಹಾರದ ದೃಷ್ಟಿಯಿಂದ ಸ್ವಲ್ಪ ಮಟ್ಟಿನ ಸಡಿಲಿಕೆ ನೀಡಲಾಗುವುದಾಗಿ ಹೇಳಿದ್ದಾರೆ. ಆದರೆ ಪ್ರತಿಯೊಬ್ಬರೂ ಮಾಸ್ಕ್ (Mask) ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ಸುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
कोरोना संक्रमण को देखते हुए लॉकडाउन को एक सप्ताह अर्थात 8 जून, 2021 तक बढ़ाने का निर्णय लिया गया है। परन्तु व्यापार के लिए अतिरिक्त छूट दी जा रही है।
सभी लोग मास्क पहनें और सामाजिक दूरी बनाए रखें।— Nitish Kumar (@NitishKumar) May 31, 2021
ಇದನ್ನೂ ಓದಿ : Central Vista ಯೋಜನೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಬಿತ್ತು ₹ 1ಲಕ್ಷ ದಂಡ!
ಲಭ್ಯ ಮಾಹಿತಿಯ ಪ್ರಕಾರ, ಈ ವಾರದ ಲಾಕ್‌ಡೌನ್ (Lockdown) ಸಮಯದಲ್ಲಿ ಸ್ವಲ್ಪ ಸಡಿಲಿಕೆ ನೀಡಲಾಗುವುದು. ಅಗತ್ಯ ವಸ್ತುಗಳ ಅಂಗಡಿಗಳನ್ನು ಮಧ್ಯಾಹ್ನ ಎರಡು ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗುವುದು. ಇನ್ನುಳಿದ ಮಳಿಗೆಗಳನ್ನು ಎರಡು ದಿನಕ್ಕೊಮ್ಮೆ ತೆರೆಯಲು ಅವಕಾಶ ಕಲ್ಪಿಸಲಾಗುವುದು.
ಬಿಹಾರದಲ್ಲಿ ಕರೋನ (COVID-19) ಪ್ರಕರಣಗಳು ಇಳಿಮುಖವಾಗಿದೆ. ಭಾನುವಾರ, ರಾಜ್ಯದಲ್ಲಿ 1,475 ಹೊಸ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ರೋಗಿಗಳ ಸಂಖ್ಯೆಯಲ್ಲಿ ಕುಸಿತವೂ ಇದೆ.
ಇದನ್ನೂ ಓದಿ : ಕರೋನಾ ಆರ್ಭಟ ಇಳಿಮುಖ, ಜೂನ್ ತಿಂಗಳಲ್ಲಿ 10 ಕೋಟಿ ಕೊವಿಶೀಲ್ಡ್ ಲಭ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ