ಬೆಂಗಳೂರು: ಮೇ 3ರ ಬಳಿಕ  ಲಾಕ್​ಡೌನ್ (Lockdown)​  ನಿಯಮಗಳಲ್ಲಿ ಯಾವುದನ್ನು ಸಡಿಲಮಾಡಬಹುದು ಎಂಬುದು ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿರುವಂಥದ್ದು. ಅವರು ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಸಹಕಾರ ಸಚಿವ  ಎಸ್.ಟಿ. ಸೋಮಶೇಖರ್ (ST Somashekhar)   ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಪೈಪ್ ಬೆಲೆ ಸೇರಿದಂತೆ ಕೃಷಿ ಚಟುವಟಿಕೆಗೆ ಸಂಬಂಧಪಟ್ಟ ಸಲಕರಣೆಗಳ ಬೆಲೆ ಹೆಚ್ಚಳ ಮಾಡಿ ಮಾರುವಂತಿಲ್ಲ. ಇಂತಹ ಪ್ರಕರಣಗಳು ಗಮನಕ್ಕೆ ಬಂದರೆ ತಕ್ಷಣ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.


ಕೇರಳ, ತಮಿಳುನಾಡಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸಲು ತೊಂದರೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ: ಸಚಿವ ಸೋಮಶೇಖರ್


ರೈತರು (Farmers) ಹಾಗೂ ವರ್ತಕರ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದ ಸಚಿವರು, ಬೆಳೆಗಳ ಸಾಗಾಟ ವೇಳೆ ಚೆಕ್ ಪೋಸ್ಟ್ ಇಲ್ಲವೇ ಪೊಲೀಸರಿಂದ ತೊಂದರೆಯಾಗುತ್ತಿದೆಯೇ? ವ್ಯಾಪಾರ ಹೇಗೆ ಆಗುತ್ತಿದೆ? ಬೆಳೆದ ಬೆಳೆಗಳಿಗೆ ಸೂಕ್ತ ದರ ಸಿಗುತ್ತಿದೆಯೇ? ಮಹಾರಾಷ್ಟ್ರದ ಪುಣೆ ಸೇರಿದಂತೆ ಹೊರ ರಾಜ್ಯಗಳಿಗೆ ಬೆಳೆ ಸಾಗಾಟ ಹಾಗೂ ಮಾರಾಟದಲ್ಲಿ ಯಾವುದಾದರೂ ತೊಂದರೆಯಾಗುತ್ತಿದೆಯೇ? ಎಂಬ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.


ಮೈಸೂರು ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಇಲ್ಲ, ತುರ್ತು ಇದ್ದರೆ ಮಾತ್ರ ಅನುಮತಿ: ಸಚಿವ ಸೋಮಶೇಖರ್


ಹೊಸದಾಗಿ ಕಟ್ಟಿದ ತರಕಾರಿ ಮಾರುಕಟ್ಟೆಯನ್ನು ವೀಕ್ಷಿಸಿದ್ದೇನೆ. ಆಲೂಗಡ್ಡೆ ಬಿತ್ತನೆ ಮಾಡುವ ಸಂಬಂಧ ಇರುವ ಅಡಚಣೆಯನ್ನು ನೀಗಿಸಲು ಜಿಲ್ಲಾಧಿಕಾರಿಗಳು ಮಂಗಳವಾರ ಸಭೆ ಕರೆದಿದ್ದು, ಅದನ್ನು ಸರಿಪಡಿಸಲಿದ್ದಾರೆ. ಇನ್ನು ಕೀಟನಾಶಕ ಹಾಗೂ ರಸಗೊಬ್ಬರ ಶೇ. 90ರಷ್ಟು ದಾಸ್ತಾನು ಇದ್ದು, ಉಳಿದವುಗಳ ಬಗ್ಗೆಯೂ ಗಮನಹರಿಸಲಾಗುವುದು ಎಂದರು.


ಇನ್ನು ಇಲ್ಲಿ ಹೆಚ್ಚುವರಿ 2 ಎಕರೆ ಜಾಗ ಕೇಳಿದ್ದು, ಮಂಜೂರು ಮಾಡುವ ಬಗ್ಗೆ ಚರ್ಚಿಸಿ ಗಮನಹರಿಸಲಾಗುವುದು. ಕೋಲ್ಡ್ ಸ್ಟೋರೇಜ್ ಮಂಜೂರಾತಿಗೆ ಕೇಳಲಾಗಿದ್ದು, ಶಾಸಕರು ಗಮನಕ್ಕೆ ತಂದಿದ್ದಾರೆ. ಪ್ರಸ್ತಾವನೆ ಸಲ್ಲಿಸಿದ ಕೂಡಲೇ ಮಂಜೂರು ಮಾಡಲಾಗುವುದು. ಇನ್ನು ನಮ್ಮ ಇಲಾಖೆಯಿಂದ ಎಪಿಎಂಸಿಗೆ ಬೇಕಾದ ಸಹಕಾರವನ್ನು ಮಾಡಿಕೊಡಲಾಗುವುದು ಎಂದು ತಿಳಿಸಿದರು. 


ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟ ಪರಿಹಾರ ಅಂದಾಜಿಗೆ ಸಚಿವ ಸೋಮಶೇಖರ್ ಸೂಚನೆ


ರೈತ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಹಲವು ಬೆಳೆಗಳು ಜಮೀನುಗಳಲ್ಲಿ ಕೊಳೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರು, ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅಂತಹ ಪ್ರಕರಣಗಳ ಸಮೀಕ್ಷೆ ನಡೆಸಿ ವರದಿ ನೀಡಿ ಪರಿಹಾರ ಕೊಡಲು ಸೂಚನೆ ನೀಡಿದ್ದಾರೆ ಎಂದರು.


ಶಾಸಕ ಪ್ರೀತಮ್ ಗೌಡ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಶ್ರೀನಿವಾಸಗೌಡ ಇದ್ದರು.