ನವದೆಹಲಿ: ಲೋಕಸಭಾ ಚುನಾವಣೆಯ ಇನ್ನೆರಡು ಹಂತಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭಾರೀ ಚುನಾವಣಾ ಪ್ರಚಾರ ನಡೆಸಿವೆ. 


COMMERCIAL BREAK
SCROLL TO CONTINUE READING

ಈ ಬೆನ್ನಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋನಭದ್ರ ಮತ್ತು ಗಾಜಿಪುರದಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಹಾರ ಮತ್ತು ಜಾರ್ಖಂಡ್ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. 


ಏತನ್ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಧ್ಯಪ್ರದೇಶದಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.


ನಾಳೆ(ಮೇ 12) 6 ರಾಜ್ಯಗಳ 59 ಲೋಕಸಭಾ ಕ್ಷೇತ್ರ ಮತ್ತು ಒಂದು ಕೇಂದ್ರಾಡಳಿತ ಪ್ರದೇಶವಾದ-ದೆಹಲಿಯಲ್ಲಿ ಮತದಾನ ನಡೆಯಲಿದೆ. ಹಾಗೆಯೇ ಮೇ 19 ರಂದು ಕಡೆಯ ಹಂತದ ಮತದಾನ ನಡೆಯಲಿದೆ.