Lok Sabha Election 2024: ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್!
Lok Sabha Election 2024: ಲೋಕಸಭಾ ಚುನಾವಣೆ ನಡುವೆ ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
Lok Sabha Polls: ಲೋಕಸಭಾ ಚುನಾವಣೆ ಸಂಭ್ರಮದ ನಡುವೆ ಹರಿಯಾಣದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಅವಧಿಯಲ್ಲಿ ಉಕ್ಕು ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಮಾಜಿ ಕೇಂದ್ರ ಸಚಿವ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇದಕ್ಕೂ ಒಂದು ದಿನ ಮೊದಲು ಬಿರೇಂದ್ರ ಸಿಂಗ್ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಗಮನಾರ್ಹವಾಗಿ, ತಿಂಗಳ ಹಿಂದೆ ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಅವರ ಪುತ್ರ ಬ್ರಿಜೇಂದ್ರ ಸಿಂಗ್ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಬಿರೇಂದ್ರ ಸಿಂಗ್ ಅವರೊಂದಿಗೆ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕಿ ಪ್ರೇಮಲತಾ ( ಅವರು 2014-2019ರ ಅವಧಿಯಲ್ಲಿ ಶಾಸಕರಾಗಿದ್ದರು.) ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಹೋಂ ಲೋನ್ ಬಡ್ಡಿಯಲ್ಲಿ ರಿಯಾಯಿತಿ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ! ಬಿಜೆಪಿ ಅಧಿಕಾರಕ್ಕೆ ಬಂದರೆ ಜಾರಿಯಾಗುವುದಂತೆ ಈ ಎಲ್ಲಾ ಯೋಜನೆಗಳು !
ಕಾಂಗ್ರೆಸ್ ಪಕ್ಷ ಸೇರ್ಪಡೆಗೂ ಮುನ್ನ ದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಬೀರೇಂದ್ರ ಸಿಂಗ್, 'ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ರಾಜೀನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೆ ಕಳುಹಿಸಿದ್ದೇನೆ. ನನ್ನ ಪತ್ನಿ ಪ್ರೇಮಲತಾ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದರು.
ಇದನ್ನೂ ಓದಿ- ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಸತ್ಯವನ್ನು ಬಯಲು ಮಾಡಲಿದೆ: ರಾಹುಲ್ ಗಾಂಧಿ
ದಶಕದ ಹಿಂದೆ ಕೈ ಬಿಟ್ಟು ಕಮಲ ಹಿಡಿದಿದ್ದ ಬಿರೇಂದ್ರ ಸಿಂಗ್:
ಬಿರೇಂದ್ರ ಸಿಂಗ್ ಅವರು 10 ವರ್ಷಗಳ ಹಿಂದೆ ಕಾಂಗ್ರೆಸ್ ಜೊತೆಗಿನ ನಾಲ್ಕು ದಶಕಗಳ ಹಳೆಯ ಸಂಬಂಧವನ್ನು ಮುರಿದು ಬಿಜೆಪಿ ಸೇರಿದ್ದರು. ಪ್ರಧಾನಿ ಮೋದಿ ನೇತೃತ್ವದ ಮೊದಲ ಸರ್ಕಾರದಲ್ಲಿ ಬೀರೇಂದ್ರ ಸಿಂಗ್ ಕೇಂದ್ರ ಉಕ್ಕು ಸಚಿವರಾಗಿದ್ದರು. ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಆದಾಗ್ಯೂ, ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ, ಬೀರೇಂದ್ರ ಸಿಂಗ್ ರೈತರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.
ಬಿರೇಂದ್ರ ಸಿಂಗ್ ಬಿಜೆಪಿ ತೊರೆಯಲು ಕಾರಣವೇನು?
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷ ತೊರೆದಿರುವ ಬಗ್ಗೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿರೇಂದ್ರ ಸಿಂಗ್, ನಾನು 42 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದವನು. ಕಾರಣಾಂತರಗಳಿಂದ 2014 ರಲ್ಲಿ ಬಿಜೆಪಿ ಸೇರಿದೆ. ನಾನು ಬಿಜೆಪಿ ಸೇರಿದಾಗಲೇ ಈ ಪಕ್ಷದ ಸಿದ್ಧಾಂತ ಬೇರೆಯಾಗಿರುತ್ತದೆ ಮತ್ತು ಎರಡೂ ಪಕ್ಷಗಳ ಸಿದ್ದಾಂತಗಳಲ್ಲಿ ಒಂದಷ್ಟು ಭಿನ್ನಾಭಿಪ್ರಾಯಗಳಿರುತ್ತವೆ ಎಂದು ತಿಳಿದಿದ್ದೆ. ನಂತರ, ದೊಡ್ಡ ವ್ಯತ್ಯಾಸವಿದೆ ಎಂದು ನಾನು ಅರಿತುಕೊಂಡೆ ಎಂದು ತಿಳಿಸಿದರು.
ಇದನ್ನೂ ಓದಿ-
ಇದೇ ಸಂದರ್ಭದಲ್ಲಿ 'ನನ್ನ ರಾಜಕೀಯ ಜೀವನದಲ್ಲಿ ನಾನು ಸಮರ್ಪಿತ ಬೆಂಬಲಿಗರೊಂದಿಗೆ ಸಂಬಂಧ ಹೊಂದಿದ್ದೇನೆ'. ಚುನಾವಣಾ ರಾಜಕೀಯದಲ್ಲಿ ಇಲ್ಲದಿದ್ದರೂ, ಸಾಧ್ಯವಾದಷ್ಟು ಕಾಲ ರಾಜಕೀಯವಾಗಿ ಸಕ್ರಿಯವಾಗಿರುತ್ತೇನೆ ಎಂದು ಬಿರೇಂದ್ರ ಸಿಂಗ್ ಇದೇ ವೇಳೆ ಸ್ಪಷ್ಟಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.