Lok Sabha Election 2024: ರಾಜ್ಯದ ಈ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಒಂದೇ ಪಕ್ಷ ಪ್ರಾಬಲ್ಯ ಇದೆ, ಆದರೆ ಈ ಬಾರಿ!

Lok Sabha Election 2024 Special: ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ 2024ರ ರಣಕಹಳೆ ಮೊಲಗಿಸಿದ್ದು, ಏಲ್ಲಾ ರಾಜಕೀಯ ಪಕ್ಷಗಳು ಇದೀಗ ಪ್ರಚಾರ ಸಿದ್ಧತೆಯಲ್ಲಿ ತೊಡಗಿವೆ. ನಮ್ಮ ದಾವಣಗೆರೆ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಡುತ್ತದೆ. ಆದರೆ ಈ ಬಾರಿ ಕಾಂಗ್ರೆಸ್ ಕನಕ್ಕಿಳಿಸಿರುವ ಅಭ್ಯರ್ಥಿಯಿಂದಾಗಿ ಈ ಕ್ಷೇತ್ರದಲ್ಲಿ ಕುತೂಹಲಕಾರಿ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ (Lok Sabha Election 2024 News In Kannada)  

Written by - Nitin Tabib | Last Updated : Mar 23, 2024, 04:52 PM IST
  • ಈ ಬಾರಿ ಬಿಜೆಪಿ ದಾವಣಗೆರೆ ಕ್ಷೇತ್ರದಿಂದ ಗಾಯತ್ರಿ ಮಲ್ಲಿಕಾರ್ಜುನ ಅವರನ್ನು ಕಣಕ್ಕಿಳಿಸಿದ್ದು,
  • ಅವರು ಸಂಸದ ಜಿ.ಎಂ. ಸಿದ್ಧೇಶ್ವರ (GM Siddheshvar) ಅವರ ಪತ್ನಿಯಾಗಿದ್ದಾರೆ.
  • ಸಿದ್ಧೇಶ್ವರ ಅವರು 2004, 2009, 2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ದಾವಣಗೆರೆ ಕ್ಷೇತ್ರದ ಅಭ್ಯರ್ಥಿಯಾಗಿದ್ದರು.
Lok Sabha Election 2024: ರಾಜ್ಯದ ಈ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಒಂದೇ ಪಕ್ಷ ಪ್ರಾಬಲ್ಯ ಇದೆ, ಆದರೆ ಈ ಬಾರಿ! title=

Davangere Lok Sabha Constituency: ಲೋಕಸಭೆ ಚುನಾವಣೆಯ ರಣಕಹಳೆ ಈಗಾಗಲೇ ಮೊಳಗಿದ್ದು. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಗೆಲ್ಲಲು ತಮ್ಮ ಶತಾಯ ಗತಾಯ ಪ್ರಯತ್ನವನ್ನು ನಡೆಸುತ್ತಿವೆ.  ಏತನ್ಮಧ್ಯೆ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರ (This Karnataka Constituency Is BJP Undefeated Fort) ಇದೀಗ ಸಾಕಷ್ಟು ಹೆಡ್ಲೈನ್ ಗಿಟ್ಟಿಸುತ್ತಿದೆ.  ಈ ಕ್ಷೇತ್ರ ಬಿಜೆಪಿಯ ಸುಭದ್ರ ಕೋಟೆ ಎಂದು ಪರಿಗಣಿಸಲಾಗುತ್ತದೆ. ಕಳೆದ 25 ವರ್ಷಗಳಿಂದ ಬಿಜೆಪಿ ಹಿಡಿತದಲ್ಲಿರುವ ರಾಜ್ಯದ ದಾವಣಗೆರೆ ಕ್ಷೇತ್ರದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. 1999 ರ ಲೋಕಸಭಾ ಚುನಾವಣೆಯಿಂದ ಈ ಸ್ಥಾನದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲ್ಲುತ್ತಿದ್ದಾರೆ. ಈ ಬಾರಿ ದಾವಣಗೆರೆ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. (Political News In Kannada)

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಯಾರು?
ದಾವಣಗೆರೆ ಕ್ಷೇತ್ರವು ದಕ್ಷಿಣ ಕರ್ನಾಟಕದ ಒಂದು ಪ್ರಮುಖ ಕ್ಷೇತ್ರವಾಗಿದೆ. ಈ ಕ್ಷೇತ್ರದ ಮೇಲೆ ಎರಡು ಶ್ರೀಮಂತ ಕುಟುಂಬಗಳಿಗೆ ಸೇರಿದ ಅಭ್ಯರ್ಥಿಗಳ ಪ್ರಾಬಲ್ಯ ಇದೆ, ಅವರು ಪರಸ್ಪರ ಸಂಬಂಧಿಗಳೂ ಆಗಿದ್ದಾರೆ. ಈ ಕ್ಷೇತ್ರದಿಂದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ 92 ವರ್ಷದ ಶಾಮನೂರು ಶಿವಶಂಕರಪ್ಪ (Shamanooru Shivashankrappa) ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ (Prabha Mallikarjun ) ಅವರನ್ನು ಕಾಂಗ್ರೆಸ್ ಈ ಬಾರಿ ಕಣಕ್ಕಿಳಿಸಿದೆ. ಆಕೆಯ ಪತಿ ಎಸ್.ಎಸ್. ಮಲ್ಲಿಕಾರ್ಜುನ (SS Mallikarjun) ಅವರು ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ತೋಟಗಾರಿಕೆ ಸಚಿವರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಯಾರು
ಈ ಬಾರಿ ಬಿಜೆಪಿ ದಾವಣಗೆರೆ ಕ್ಷೇತ್ರದಿಂದ ಗಾಯತ್ರಿ ಮಲ್ಲಿಕಾರ್ಜುನ ಅವರನ್ನು ಕಣಕ್ಕಿಳಿಸಿದ್ದು, ಅವರು ಸಂಸದ ಜಿ.ಎಂ. ಸಿದ್ಧೇಶ್ವರ (GM Siddheshvar) ಅವರ ಪತ್ನಿಯಾಗಿದ್ದಾರೆ. ಸಿದ್ಧೇಶ್ವರ ಅವರು 2004, 2009, 2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ದಾವಣಗೆರೆ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. ಸಿದ್ಧೇಶ್ವರ ತಂದೆ. ಮಲ್ಲಿಕಾರ್ಜುನಪ್ಪ ಅವರು 1996 ಮತ್ತು 1999ರಲ್ಲಿ ಲೋಕಸಭೆಯಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಬಿಜೆಪಿಯ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್ ಮತ್ತು ಹಿರಿಯ ಮುಖಂಡ ಮಾಡಾಳ್ ವಿರೂಪಾಕ್ಷಪ್ಪ ಅವರು ಗಾಯತ್ರಿ ಸಿದ್ಧೇಶ್ವರ್ ವಿರುದ್ಧ ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸುತ್ತಿದ್ದು, ಜಿಲ್ಲೆಯ ಹಲವು ಪ್ರಮುಖ ಬಿಜೆಪಿ ನಾಯಕರು ಗಾಯತ್ರಿ ಸಿದ್ಧೇಶ್ವರ್ ಅವರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕ್ಷೇತ್ರಕ್ಕೆ ಪ್ರಭಾ ಮಲ್ಲಿಕಾರ್ಜುನ ಅವರ ಎಂಟ್ರಿ ಕುತೂಹಲ ಮೂಡಿಸಿದೆ.
ಪ್ರಭಾ ಮಲ್ಲಿಕಾರ್ಜುನ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಈ ಬಾರಿ ಈ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಾಕಷ್ಟು ಕುತೂಹಲವನ್ನು ತುಂಬಿದೆ. 2019 ರಲ್ಲಿ ಚುನಾವಣೆಯಲ್ಲಿ ಸಿದ್ಧೇಶ್ವರ್ 1.69 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು 17,607 ಮತಗಳಿಂದ ಗೆಲುವಿನ ಬಾವುಟ ಹಾರಿಸಿದ್ದರು. ಎಸ್ ಎಸ್  ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಅವರೇ ಕಣದಲ್ಲಿರುವ ಕಾರಣ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸುಲಭದ ಮಾತಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಇದನ್ನೂ ಓದಿ-CAA ಅಧಿಸೂಚನೆ ಮೇಲೆ ನಿಷೇಧ ವಿಧಿಸಲು ಸುಪ್ರೀಂ ನಕಾರ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ

ಪ್ರಭಾ ಎಂಬಿಬಿಎಸ್ (ಡೆಂಟಲ್) ಪದವಿ ಹೊಂದಿದ್ದಾರೆ
ಪ್ರಭಾ ಮಲ್ಲಿಕಾರ್ಜುನ ಎಂಬಿಬಿಎಸ್ (ಡೆಂಟಲ್) ಪದವಿ ಹಾಗೂ ಗಾಯತ್ರಿ ಮಲ್ಲಿಕಾರ್ಜುನ (Gayatri Mallikarjun Educational Qualification) ಪಿಯುಸಿ (12ನೇ ತರಗತಿ) ಪಾಸಾಗಿದ್ದಾರೆ. ಪ್ರಭಾ ಅವರು ಎಸ್‌ಎಸ್ ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಮತ್ತು ಬಾಪೂಜಿ ಎಜುಕೇಷನಲ್ ಅಸೋಸಿಯೇಶನ್‌ನ ಆಡಳಿತ ಮಂಡಳಿ ಸದಸ್ಯರೂ ಆಗಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರವು ಜಗಳೂರು, ಹರಪನಹಳ್ಳಿ, ಹರಿಹರ, ದಾವಣಗೆರೆ ದಕ್ಷಿಣ, ದಾವಣಗೆರೆ ಉತ್ತರ, ಮಾಯಕೊಂಡ, ಚನ್ನಗಿರಿ ಮತ್ತು ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಇದನ್ನೂ ಓದಿ-CAA ಜಾರಿಗೊಳಿಸಿದ Modi Government, ಏನಿದು ಸಿಎಎ, ಇಲ್ಲಿದೆ ಅದರ ಕಂಪ್ಲೇಟ್ ಮಾಹಿತಿ

ಬಿಜೆಪಿ ಗೆಲುವಿನ ವಿಶ್ವಾಸವಿದೆ
ಹರಿಹರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಇದ್ದು, ಕಾಂಗ್ರೆಸ್ ಅಭ್ಯರ್ಥಿಯಿಂದ ತೀವ್ರ ಪೈಪೋಟಿ ನಿರೀಕ್ಷಿಸಲಾಗುತ್ತಿದೆ. ಆದರೆ, ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಬಿಜೆಪಿ ಈ ಬಾರಿ ತನ್ನ ಅಭ್ಯರ್ಥಿಯ ಗೆಲುವಿನ ವಿಶ್ವಾಸದಲ್ಲಿದೆ. ಈ ಸ್ಥಾನ 1971 ರಿಂದ 1991 ರವರೆಗೆ ಕಾಂಗ್ರೆಸ್ ಬಳಿ ಇತ್ತು. 1998ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಗೆಲುವು ಸಾಧಿಸಿದ್ದರು. ಅದೇನೇ ಇದ್ದರೂ ಎರಡು ಪ್ರಬಲ ಕುಟುಂಬಗಳು ಮಹಿಳಾ ಅಭ್ಯರ್ಥಿಗಳು ಕನಕ್ಕಿಳಿದ ಕಾರಣ, ದಾವಣಗೆರೆ ಕ್ಷೇತ್ರವು ರಾಜ್ಯದ ಪ್ರಮುಖ ಕ್ಷೇತ್ರವಾಗಿ ಹೆಡ್ಲೈನ್ ಗಿಟ್ಟಿಸಿದ್ದು ಮಾತ್ರ ನಿಜ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News