ನವದೆಹಲಿ: ಉತ್ತರ ಭಾರತದ ಪ್ರಮುಖ ರಾಜ್ಯಗಳಾದ ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ 9 ರಾಜ್ಯಗಳ 71 ಲೋಕಸಭಾ ಸ್ಥಾನಗಳಿಗೆ ಇಂದು ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.


COMMERCIAL BREAK
SCROLL TO CONTINUE READING

ಮಹಾರಾಷ್ಟ್ರದ 17, ರಾಜಸ್ಥಾನದ 13, ಉತ್ತರಪ್ರದೇಶದ 13, ಪಶ್ಚಿಮ ಬಂಗಾಳದ 8, ಮಧ್ಯ ಪ್ರದೇಶದ 6, ಒಡಿಶಾದ 6, ಬಿಹಾರದ 5, ಜಾರ್ಖಂಡ್ ನ 3 ಮತ್ತು ಜಮ್ಮು- ಕಾಶ್ಮೀರದ ಒಂದು ಕ್ಷೇತ್ರಕ್ಕೆ ಇಂದು ಚುನಾವಣೆ ನಡೆಯಲಿದೆ. ಒಟ್ಟಾರೆ 12.79 ಕೋಟಿ ಮತದಾರರು 961 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲಿದ್ದಾರೆ.


ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಭರದ ಸಿದ್ಧತೆ ನಡೆದಿದ್ದು, ಮತದಾರರು ಸಾಲಿನಲ್ಲಿ ನಿಂತು ಮತಹಾಕಲು ಕಾಯುತ್ತಿದ್ದಾರೆ. ಎಲ್ಲೆಡೆ ಮತಗಟ್ಟೆ ಅಧಿಕಾರಿಗಳು ಇವಿಎಂ ಯತ್ರಗಳ ಅಂತಿಮ ಹಂತದ ಪರಿಶೀಲನೆ ನಡೆಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭವಾಗಲಿದೆ.