ನವದೆಹಲಿ: ಲೋಕಸಭಾ ಚುನಾವಣೆ 2019ರ 6ನೇ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.


COMMERCIAL BREAK
SCROLL TO CONTINUE READING

ಕೇಂದ್ರ ಸಚಿವರಾದ ರಾಧಾಮೋಹನ್‌ ಸಿಂಗ್‌, ಹರ್ಷವರ್ಧನ್‌, ಮೇನಕಾ ಗಾಂಧಿ, ಎಸ್‌ಪಿ ಮುಖ್ಯಸ್ಥ ಅಖೀಲೇಶ್‌ ಯಾದವ್‌, ಕಾಂಗ್ರೆಸ್‌ ನಾಯಕರಾದ ದಿಗ್ವಿಜಯ್‌ ಸಿಂಗ್‌, ಜ್ಯೋತಿರಾ ದಿತ್ಯ ಸಿಂಧ್ಯಾ ಮತ್ತಿತರ ಪ್ರಮುಖ ನಾಯಕರೂ ಸೇರಿದಂತೆ ಒಟ್ಟು 979 ಅಭ್ಯರ್ಥಿಗಳು ಕಣದಲ್ಲಿದ್ದು, 10.17 ಕೋಟಿ ಮತದಾರರು ಈ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.


ಉತ್ತರಪ್ರದೇಶದ 14, ಹರಿಯಾಣದ 10, ಬಿಹಾರ, ಮಧ್ಯಪ್ರದೇಶ ಮತ್ತು ಪ.ಬಂಗಾಲದ ತಲಾ 8, ದಿಲ್ಲಿಯ 7 ಮತ್ತು ಜಾರ್ಖಂಡ್‌ನ‌ 4 ಕ್ಷೇತ್ರಗಳನ್ನೊಳಗೊಂಡಂತೆ ಒಟ್ಟು 59 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.


ದೆಹಲಿಯ ಏಳೂ ಕ್ಷೇತ್ರಗಳಲ್ಲಿ ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಏಳೂ ಸ್ಥಾನಗಳನ್ನೂ ತನ್ನದಾಗಿಸಿಕೊಂಡಿತ್ತು. ಹರಿಯಾಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಇಲ್ಲಿಯೂ ಸಹ ಮೂರೂ ಪಕ್ಷಗಳ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್, ದಿಗ್ವಿಜಯ್ ಸಿಂಗ್ ಸೇರಿದಂತೆ ಅನೇಕ ಘಟಾನುಘಟಿಗಳು ಕಣದಲ್ಲಿದ್ದಾರೆ. ಉತ್ತರಪ್ರದೇಶದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಇಲ್ಲಿಯೂ ಬಿಜೆಪಿ ಹಾಗೂ ಎಸ್ಪಿ-ಬಿಎಸ್ಪಿ ನಡುವೆ ಭಾರೀ ಪೈಪೋಟಿ ನಡೆಯಲಿದೆ.