ಲೋಕಸಭಾ ಚುನಾವಣಾ ಫಲಿತಾಂಶ 2019: ಪಶ್ಚಿಮ ಬಂಗಾಳದಲ್ಲಿ ಎಲ್ಲಿ, ಯಾರಿಗೆ ಗೆಲುವು?

ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

Last Updated : May 24, 2019, 03:22 PM IST
ಲೋಕಸಭಾ ಚುನಾವಣಾ ಫಲಿತಾಂಶ 2019: ಪಶ್ಚಿಮ ಬಂಗಾಳದಲ್ಲಿ ಎಲ್ಲಿ, ಯಾರಿಗೆ ಗೆಲುವು? title=

ನವದೆಹಲಿ: ಕಳೆದ ಎರಡು ತಿಂಗಳಿಂದ ನಡೆದ ಲೋಕಸಭಾ ಚುನಾವಣೆ 2019ರ ಪ್ರಕ್ರಿಯೆ ಚುನಾವಣಾ ಫಲಿತಾಂಶಗಳ ಬಳಿಕ ಬಹುತೇಕ ಪೂರ್ಣಗೊಂಡಿದೆ. ಚುನಾವಣಾ ಆಯೋಗದ ವೆಬ್ಸೈಟ್ ಮಾಹಿತಿ ಪ್ರಕಾರ, 542 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 302, ಕಾಂಗ್ರೆಸ್ 52, ತೃಣಮೂಲ ಕಾಂಗ್ರೆಸ್ 22 ಸ್ಥಾನಗಳನ್ನು ಪಡೆದಿವೆ. ಒಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಇನ್ನು ಅಧಿಕೃತ ಫಲಿತಾಂಶ ಹೊರಬಿದ್ದಿಲ್ಲ.

ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ ಬಿಜೆಪಿ 18, ಕಾಂಗ್ರೆಸ್ 2 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ.

ಚುನಾವಣಾ ಆರಂಭದಿಂದಲೂ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳ ನಡುವೆ ಪಶ್ಚಿಮ ಬಂಗಾಳದಲ್ಲಿ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ನಡೆದ ಗಲಭೆ ಹಿಂಸಾಚಾರಕ್ಕೆ ತಿರುಗಿ 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅಷ್ಟೇ ಅಲ್ಲದೆ, ಭಾರತಿಯ ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಚುನಾವಣಾ ಆಯೋಗವು ತನ್ನ ವಿಶೇಷಾಧಿಕಾರವನ್ನು ಚಲಾಯಿಸಿ ನಿಗದಿತ ಅವಧಿಗೂ ಮುನ್ನವೇ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಎಳೆದಿತ್ತು. ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗಳ ಬಳಿಕವೂ ಟಿಎಂಸಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 18 ಸ್ಥಾನಗಳನ್ನು ಗಳಿಸುವ ಮೂಲಕ ಪಶ್ಚಿಮ ಬಂಗಾಳದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಪಶ್ಚಿಮ ಬಂಗಾಳ ಲೋಕಸಭಾ ಚುನಾವಣೆ ವಿಜೇತರ ಪಟ್ಟಿ 

 

 

Trending News