Lokshabha Elections 2024: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಶನಿವಾರ ಮುಕ್ತಯವಾಗಿದ್ದು, ಶೇ.59.06ರಷ್ಟು ಮತದಾನವಾಗಿದೆ. ದೇಶದ 7 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವು ನಡೆಯಿತು. ಜೂನ್ 1ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಪ್ರಕಟಗೊಳ್ಳಲಿದೆ.
ಇನ್ನೂ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳ ಪೈಕಿ 359 ಮಂದಿ 5ನೇ ತರಗತಿಗಿಂತ ಹೆಚ್ಚು ಓದಿಲ್ಲ ಹಾಗೂ 121 ಮಂದಿ ಅನಕ್ಷರಸ್ಥರು ಎಂಬುದು ಬಹಿರಂಗಗೊಂಡಿದೆ.
ಇದನ್ನೂ ಓದಿ: ಜೀರೋ ಟ್ರಾಫಿಕ್’ನಲ್ಲಿ ರೋಗಿಯನ್ನು ಕರೆದೊಯ್ದ ಆಂಬುಲೆನ್ಸ್!
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳನ್ನು ಅಧ್ಯಯನ ನಡೆಸಿದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಈ ಮಾಹಿತಿಯನ್ನು ನೀಡಿದೆ.
ಮಾಹಿತಿ ಪ್ರಕಾರ, 647 ಅಭ್ಯರ್ಥಿಗಳು 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, 1,303 ಅಭ್ಯರ್ಥಿಗಳು 12ನೇ ತರಗತಿ ಪಾಸಾಗಿದ್ದಾರೆ. 1,502 ಅಭ್ಯರ್ಥಿಗಳು ಪದವಿ ಪಡೆದಿದ್ದಾರೆ. ಇನ್ನೊಂದೆಡೆ 198 ಅಭ್ಯರ್ಥಿಗಳು ಡಾಕ್ಟರೇಟ್ ಪಡೆದುಕೊಂಡಿದ್ದಾರೆಂದು ಎಡಿಆರ್ ಮಾಹಿತಿ ನೀಡಿದೆ.
ಇದನ್ನೂ ಓದಿ: ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.