Lok Sabha Elections 2024: ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟಿಸಲು ದೆಹಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. ಶೇ.40ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್​ಚೇರ್ ವ್ಯವಸ್ಥೆ ಇರಲಿದ್ದು​, ಸ್ವಯಂಸೇವಕರೂ ಇರಲಿದ್ದಾರೆ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಮತದಾನಕ್ಕೆ 55 ಲಕ್ಷ EVM


ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್​ಡೆಸ್ಕ್​, ವಿದ್ಯುತ್​ ಸೇರಿ ಸಕಲ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. ಲೋಕಸಭಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ಸರ್ವಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶದಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶದಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ EVMಗಳನ್ನು ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.


ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ  


1.8 ಕೋಟಿ ಜನರಿಂದ ಮೊದಲ ಬಾರಿ ಮತದಾನ


ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. 2 ಸಾವಿರಕ್ಕೂ ಹೆಚ್ಚು ಶತಾಯುಷಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಅಂತಾ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.


12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚು


12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣ ಒದಗಿಸಲು ನಾವು ಬದ್ಧರಾಗಿದ್ದೇವೆ. 17ನೇ ಲೋಕಸಭಾ ಅವಧಿಯು ಇದೇ ಜೂನ್ 16ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಅಂತಾ ಹೇಳಿದರು. 


ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ