Lok Sabha Elections 2024: ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕೇಂದ್ರದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. 


COMMERCIAL BREAK
SCROLL TO CONTINUE READING

ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವ ಕಾಪಾಡಿಕೊಳ್ಳಬೇಕು. ದ್ವೇಷ ಭಾಷಣ ಮಾಡಬಾರದು ಹಾಗೂ ಶತ್ರುಗಳ ರೀತಿ ವರ್ತಿಸಬಾರದು ಎಂದು ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜಕೀಯಪ್ರೇರಿತ ಭಾಷಣ ಮಾಡುವಂತಿಲ್ಲ. ವಿಷಯ ಆಧಾರಿತ ಪ್ರಚಾರ ಮಾಡಬೇಕು. ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ. ಯಾವುದೇ ಜಾತಿ ಅಥವಾ ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲವೆಂದು ಹೇಳಿದ್ದಾರೆ. 


7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ  


ಅಭ್ಯರ್ಥಿಗಳ ಖಾಸಗಿ ಜೀವನದ ಬಗ್ಗೆ ಟೀಕಿಸುವಂತಿಲ್ಲ. ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕಟಿಸಬಾರದು. ಪಕ್ಷದ ಜಾಹೀರಾತುಗಳನ್ನು ಸುದ್ದಿಯಾಗಿ ನೀಡುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ/ಅವಮಾನಿಸುವ ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ನಿರ್ಬಂಧ ಹೇರಲಾಗುವುದು. ಸ್ಟಾರ್ ಪ್ರಚಾರಕರು ಪ್ರಚಾರದ ಗೌರವ ಕಾಪಾಡಿಕೊಳ್ಳಬೇಕು. ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲವೆಂದು ಹೇಳಿದ್ದಾರೆ. 


ವಹಿವಾಟುಗಳ ಬಗ್ಗೆ ಬ್ಯಾಂಕುಗಳು ಮಾಹಿತಿ ನೀಡಬೇಕು. ಎಲ್ಲಾ ಬ್ಯಾಂಕ್​ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ರಾಜೀವ್ ಕುಮಾರ್ ದೇಶದ ಬ್ಯಾಂಕ್‌ಗಳಿಗೆ ನಿರ್ದೇಶ ನೀಡಿದ್ದಾರೆ.


ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ