Lok Sabha Elections 2024: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ; ಪ್ರಧಾನಿ ಮೋದಿ ಹೇಳಿದ್ದೇನು?
Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ʼನಾವು ಮಾಡಿರುವ ಸಾಧನೆಯನ್ನು ಮುಂದಿಟ್ಟುಕೊಂಡು ಜನರ ಬಳಿ ಮತಯಾಚನೆ ಮಾಡಲಿದ್ದೇವೆʼ ಅಂತಾ ಹೇಳಿದ್ದಾರೆ. ʼಪ್ರಜಾಪ್ರಭುತ್ವದ ದೊಡ್ಡ ಹಬ್ಬ ಮತ್ತೆ ಬಂದಿದೆ! ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ನಾವು ಅಂದರೆ BJP-NDA ಮೈತ್ರಿಕೂಟವು ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಾದ್ಯಂತ ಉತ್ತಮ ಸೇವೆ ನೀಡಿರುವ ನಮ್ಮ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗಲಿದ್ದೇವೆʼ ಅಂತಾ ಹೇಳಿದ್ದಾರೆ.
ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ʼ10 ವರ್ಷಗಳ ಹಿಂದೆ ನಾವು ಅಧಿಕಾರ ವಹಿಸಿಕೊಳ್ಳುವ ಮೊದಲು ‘ಇಂಡಿಯಾ’ ಮೈತ್ರಿಕೂಟ(I.N.D.I.A Alliance)ದ ಪಕ್ಷಗಳ ಸರ್ಕಾರದ ಆಡಳಿತದಿಂದ ದೇಶದ ಜನರು ಭ್ರಮನಿರಸನಗೊಂಡಿದ್ದರು. ಹಗರಣಗಳು ಮತ್ತು ಕೆಟ್ಟ ನೀತಿಗಳಿಂದ ಯಾವುದೇ ಕ್ಷೇತ್ರವನ್ನು ಬಿಟ್ಟಿರಲಿಲ್ಲ. ಇಡೀ ಜಗತ್ತೇ ಭಾರತವನ್ನು ಕೈಬಿಟ್ಟಿತ್ತು. ಅಲ್ಲಿಂದ ಮುಂದಕ್ಕೆ ನಮ್ಮದು ಅದ್ಭುತವಾದ ತಿರುವು. 140 ಕೋಟಿ ಭಾರತೀಯರಿಂದ ಕೂಡಿರುವ ನಮ್ಮ ರಾಷ್ಟ್ರವು ಅಭಿವೃದ್ಧಿಯ ಹೊಸ ದಾಖಲೆ ಸೃಷ್ಟಿಸುತ್ತಿದೆ. ನಾವು 5ನೇ ಅತಿದೊಡ್ಡ ಆರ್ಥಿಕತೆಯಾಗಿದ್ದೇವೆ ಮತ್ತು ಕೋಟಿಗಟ್ಟಲೆ ಜನರನ್ನು ಬಡತನದಿಂದ ಮುಕ್ತಗೊಳಿಸಿದ್ದೇವೆ. ನಮ್ಮ ಯೋಜನೆಗಳು ಭಾರತದ ಎಲ್ಲಾ ಭಾಗಗಳನ್ನು ತಲುಪಿವೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡಿದೆʼ ಎಂದು ಮೋದಿ ಹೇಳಿದ್ದಾರೆ.
7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ
ಮೋದಿ ಇದೇ ವೇಳೆ ಭರವಸೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ