Lok Sabha Elections 2024: ಪಟ್ನಾದಲ್ಲಿ ವಿರೋಧ ಪಕ್ಷಗಳ ಮಹಾ ಮಂಥನ! ಏನಿರಲಿದೆ ಏಜೆಂಡಾ? ಯಾವ ವಿಷಯಗಳ ಮೇಲೆ ಚರ್ಚೆ?

General Elections 2024: ಈ ಸಭೆಯು ಭಾರತೀಯ ಜನತಾ ಪಕ್ಷ ನೇತೃತ್ವದ NDA ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಆರಂಭ ಎಂದೇ ಬಿಂಬಿಸಲಾಗುತ್ತಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಅನಾಮಧೇಯತೆಯ ಷರತ್ತಿನ ಮೇರೆಗೆ, 'ಇದು ಕೇವಲ ಆಂಭ. ವೈಚಾರಿಕ ಹೊಂದಾಣಿಕೆ ಮುಖ್ಯ' ಎಂದು ಹೇಳಿದ್ದಾರೆ.   

Written by - Nitin Tabib | Last Updated : Jun 22, 2023, 04:08 PM IST
  • ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)
  • ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್)
  • ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಕೂಡ ಸಭೆಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
Lok Sabha Elections 2024: ಪಟ್ನಾದಲ್ಲಿ ವಿರೋಧ ಪಕ್ಷಗಳ ಮಹಾ ಮಂಥನ! ಏನಿರಲಿದೆ ಏಜೆಂಡಾ? ಯಾವ ವಿಷಯಗಳ ಮೇಲೆ ಚರ್ಚೆ? title=

Lok Sabha Elections 2024: 2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ನೇತೃತ್ವದ ಎನ್ಡಿಎ ಅನ್ನು ಸೋಲಿಸುವ ಉದ್ದೇಶದಿಂದ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರು ಶುಕ್ರವಾರ ಪಾಟ್ನಾದಲ್ಲಿ ಸಭೆಯಲ್ಲಿ ಪಾಲ್ಗೊಂಡು ಮಂಥನ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಪ್ರಬಲ ಪ್ರತಿಪಕ್ಷದ ಫ್ರಂಟ್ ಅನ್ನು ರಚಿಸುವ ಕುರಿತು ಚರ್ಚಿಸಲಿವೆ. ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಯಾರು? ಗಳಂತಹ  ಪ್ರಶ್ನೆಗಳನ್ನು ಬದಿಗಿಟ್ಟು, ಸಾಮಾನ್ಯ ಸ್ಪರ್ಧೆಯ ತಂತ್ರವನ್ನು ನಿರ್ಧರಿಸಲಾಗುತ್ತಿದೆ ಎನ್ನಲಾಗಿದೆ. 

ಈ ಸಭೆಯು ಎನ್‌ಡಿಎಯನ್ನು ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಆರಂಭ ಎಂದು ಪರಿಗಣಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಟಿಸಿರುವ ವರದಿಯ ಪ್ರಕಾರ, ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಅನಾಮಧೇಯತೆಯ ಷರತ್ತಿನ ಮೇಲೆ, 'ಇದು ಕೇವಲ ಪ್ರಾರಂಭವಾಗಿದೆ. ವೈಚಾರಿಕ ಹೊಂದಾಣಿಕೆ ತುಂಬಾ ಮುಖ್ಯ' ಎಂದಿದ್ದಾರೆ. ಈ ವೇಳೆ ಚುನಾವಣಾ ತಂತ್ರಗಾರಿಕೆ, ನಾಯಕತ್ವ ಸಂಬಂಧಿತ ಪ್ರಶ್ನೆಗಳು ಹಾಗೂ ಸೀಟು ಹಂಚಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಯಾರೆಲ್ಲಾ ಮುಖಂಡರು ಭಾಗಿಯಾಗಲಿದ್ದಾರೆ?
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ನೇತೃತ್ವದಲ್ಲಿ ವಿಪಕ್ಷಗಳ ಮೊದಲ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಕೂಡ ಸಭೆಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಈ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ!
ಪ್ರತಿಪಕ್ಷ ಮುಖಂಡರ ಪ್ರಕಾರ, ಈ ಸಭೆಯ ಅಜೆಂಡಾ ಬಿಜೆಪಿಯನ್ನು ಮೂಲೆಗುಂಪು ಮಾಡಲು ಪ್ರಸ್ತಾಪಿಸಬೇಕಾದ ವಿಷಯಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಮಣಿಪುರ ಹಿಂಸಾಚಾರದ ವಿಷಯ ಮತ್ತು ಅದನ್ನು ನಿಯಂತ್ರಿಸುವಲ್ಲಿ ವಿಫಲವಾದ ಆರೋಪದ ಬಗ್ಗೆಯೂ ಚರ್ಚೆಗಳು ನಡೆಯಬೇಕಿವೆ ಎನ್ನಲಾಗಿದೆ. ಈ ಸಭೆಯಲ್ಲಿ ಕೇಜ್ರಿವಾಲ್ ಸರ್ಕಾರದಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಯ ಬಗ್ಗೆಯೂ ಚರ್ಚೆ ನಡೆಸಬಹುದು.

ಇದನ್ನೂ ಓದಿ-Maharashtra Politics: 'ಅಣ್ಣನ ಎಲ್ಲಾ ಇಚ್ಚೆಗಳು ನೆರವೇರಲಿ' ಅಜೀತ್ ಪವಾರ್ ಕುರಿತು ಸಹೋದರಿ ಸುಪ್ರಿಯಾ ಸುಳೆ ಹೀಗೆ ಹೇಳಿದ್ದೇಕೆ?

ಟಿಎಂಸಿ ಮತ್ತು ಕಾಂಗ್ರೆಸ್‌ ಮಧ್ಯೆ ಭಿನ್ನಾಭಿಪ್ರಾಯ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯವಿರುವ ಸಂದರ್ಭದಲ್ಲಿ ಈ ಸಭೆ ನಡೆಯುತ್ತಿದೆ. ಆದಾಗ್ಯೂ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮುರ್ಷಿದಾಬಾದ್ ಜಿಲ್ಲೆಯ ಬ್ಲಾಕ್ ಕಚೇರಿಯ ಹೊರಗೆ ಧರಣಿ ಕುಳಿತಿದ್ದಾರೆ, ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ-PM Modi In US: ಪ್ರಧಾನಿ ಮೋದಿ ಭಾಷಣ ಬಹಿಷ್ಕರಿಸಲು ಮುಂದಾದ ಇಬ್ಬರು ಅಮೆರಿಕ ಸಂಸದರು

ಈ ವಿರೋಧ ಪಕ್ಷಗಳು ಶಾಮೀಲಾಗುತ್ತಿಲ್ಲ!
ತೆಲಂಗಾಣದ ಭಾರತ್ ರಾಷ್ಟ್ರ ಸಮಿತಿ, ಒಡಿಶಾದ ಬಿಜು ಜನತಾ ದಳ, ಬಹುಜನ ಸಮಾಜ ಪಕ್ಷ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿಯೇತರ ಪಕ್ಷಗಳಲ್ಲಿ ಸಭೆಗೆ ಹಾಜರಾಗುವ ಸಾಧ್ಯತೆಯಿಲ್ಲ ಎನ್ನಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News