Lok Sabha Elections 2024: 2024ರ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮುಹೂರ್ತ ಫಿಕ್ಸ್ ಮಾಡಿದೆ. ಏಪ್ರಿಲ್ 19ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.


COMMERCIAL BREAK
SCROLL TO CONTINUE READING

ದೆಹಲಿಯ ವಿಜ್ಞಾನಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ʼನಾವು ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಅಂತಾ ಹೇಳಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ. 


ಇದನ್ನೂ ಓದಿ: Lok Sabha Election 2024: ಅಪ್ಪ-ಮಕ್ಕಳು ಅಸ್ತಿತ್ವಕ್ಕಾಗಿ ಏನೇನೋ ಮಾಡಬಾರದು


2024ರ ಲೋಕಸಭಾ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದಲ್ಲದೆ ಹೃದಯಾಘಾತದಿಂದ ಮೃತಪಟ್ಟಿದ್ದ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಂದ ತೆರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಸಹ ಉಪ ಚುನಾವಣೆ ಘೋಷಿಸಲಾಗಿದೆ.


Electoral Bonds: ಎಸ್‌ಬಿಐನ ಎಲೆಕ್ಟೋರಲ್ ಬಾಂಡ್ ಡೇಟಾದಿಂದ ಯಾವ ಮಾಹಿತಿ ಲಭ್ಯವಾಗುತ್ತೆ?


ಮೇ 7ರಂದು 2ನೇ ಹಂತದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ–ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಮತದಾನ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ