Lok Sabha Election 2024: ಮೂರನೇ ಬಾರಿಗೆ ಪ್ರಧಾನಿ ಹುದ್ದೆಯ ನಿರೀಕ್ಷೆಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) 2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಇಂದು (ಮಂಗಳವಾರ ಮೇ 14, 2024) ನಾಮಪತ್ರ ಸಲ್ಲಿಸಲಿದ್ದಾರೆ.
ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ (Varanasi Lok Sabha Constituency) ನಾಮಪತ್ರ ಸಲ್ಲಿಕೆಗೂ ಒಂದು ದಿನ ಮೊದಲು 6 ಕಿಮೀ ಉದ್ದದ ರೋಡ್‌ಶೋ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಗರದ ಸಮಗ್ರ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಕೊಡುಗೆ ನೀಡುವುದಾಗಿ ಮತದಾರರಿಗೆ ಭರವಸೆ ನೀಡಿದರು.
ರೋಡ್ ಶೋ ಕುರಿತಂತೆ ಎಕ್ಸ್ (ಟ್ವೀಟ್) ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi), "ನಾನು ಭಾವೋದ್ವೇಗಕ್ಕೆ ಒಳಗಾಗಿದ್ದೇನೆ! ನಿಮ್ಮ ಪ್ರೀತಿಯ ಛಾಯೆಯಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿಯಲೇ ಇಲ್ಲ. ಮಾ ಗಂಗಾ ನನ್ನನ್ನು ಕರೆದಿದ್ದಾಳೆ ಎಂದು ನಾನು ಹೇಳಿದ್ದೆ. ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೇ ಲಿಯಾ ಹೈ (ಇಂದು ಮಾ ಗಂಗಾ ನನ್ನನ್ನು ದತ್ತು ಪಡೆದಿದ್ದಾಳೆ) ," ಎಂದು ಬರೆದಿದ್ದಾರೆ.
ಇದನ್ನೂ ಓದಿ- "ಅವಕಾಶ ವಂಚಿತರಿಗೆ ಸಾಮಾಜಿಕ ನ್ಯಾಯ ದೊರಕಿಸಲು ಜಾತಿ ಗಣತಿ: ಕಾಂಗ್ರೆಸ್ ಪಕ್ಷ ಇದಕ್ಕೆ ಬದ್ಧ" - ಮುಖ್ಯಮಂತ್ರಿ ಸಿದ್ದರಾಮಯ್ಯ
ವಾರಣಾಸಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿ:
ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನರೇಂದ್ರ ಮೋದಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi Chief Minister Arvind Kejriwal) ವಿರುದ್ಧ ಸ್ಪರ್ಧಿಸಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಐತಿಹಾಸಿಕ ಗೆಲುವು ಸಾಧಿಸಿದ್ದರು. ಇದರೊಂದಿಗೆ ವಾರಣಾಸಿ ಕ್ಷೇತ್ರವನ್ನು ಬಿಜೆಪಿ ಭದ್ರಕೋಟೆಯಾಗಿ ಗಟ್ಟಿಗೊಳಿಸಿತು.
ನಂತರ 2019ರ ಚುನಾವಣೆಯಲ್ಲೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಪ್ರಧಾನಿ ಮೋದಿ ಭರ್ಜರಿ ಜಯಭೇರಿ ಬಾರಿಸಿದರು. ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬರೋಬ್ಬರಿ 6,74,664 ಕ್ಕೂ ಹೆಚ್ಚು ಮತಗಳೊಂದಿಗೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದರು. ಇದೀಗ ಮೂರನೇ ಬಾರಿಗೂ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ.
बाबा विश्वनाथ की नगरी की देवतुल्य जनता-जनार्दन का नमन और वंदन!
आज मेरा रोम-रोम काशी के कण-कण का अभिनंदन कर रहा है। रोड शो में आप सबसे जो अपनत्व और आशीर्वाद मिला है, वो अकल्पनीय और अतुलनीय है। मैं अभिभूत और भावविभोर हूं! आपके स्नेह की छांव में 10 वर्ष कैसे बीत गए, पता ही नहीं… pic.twitter.com/FrzzjtlDNG
— Narendra Modi (@narendramodi) May 13, 2024
ಇದನ್ನೂ ಓದಿ- ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ: ಸಿಎಂ ಸಿದ್ದರಾಮಯ್ಯ
ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.