ದೆಹಲಿಯ 3 ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಒಗ್ಗೂಡಿಸುವ ಮಸೂದೆಗೆ ಲೋಕಸಭಾ ಅಂಗೀಕಾರ

ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಒಗ್ಗೂಡಿಸುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರದಂದು (ಮಾರ್ಚ್ 30) ಅಂಗೀಕರಿಸಲಾಯಿತು.

Written by - Zee Kannada News Desk | Last Updated : Mar 30, 2022, 09:27 PM IST
  • ಸದನದಲ್ಲಿ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು,
  • ಆದರೆ ವಿರೋಧ ಪಕ್ಷದ ಸದಸ್ಯರು ಮಂಡಿಸಿದ ಹಲವಾರು ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು.
ದೆಹಲಿಯ 3 ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಒಗ್ಗೂಡಿಸುವ ಮಸೂದೆಗೆ ಲೋಕಸಭಾ ಅಂಗೀಕಾರ  title=

ನವದೆಹಲಿ: ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಒಗ್ಗೂಡಿಸುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರದಂದು (ಮಾರ್ಚ್ 30) ಅಂಗೀಕರಿಸಲಾಯಿತು.

ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ (Delhi Municipal Corporations) ಅನ್ನು 2011ರಲ್ಲಿ ಆಗಿನ ಶೀಲಾ ದೀಕ್ಷಿತ್ ನೇತೃತ್ವದ ದೆಹಲಿ ಸರ್ಕಾರವು ಉತ್ತಮ ಸೇವೆಗಳನ್ನು ಒದಗಿಸಲು ಮಹಾನಗರ ಪಾಲಿಕೆಗಳನ್ನು ತ್ರಿವಿಭಜಿಸಿತು.

ಇದನ್ನೂ ಓದಿ: 'ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ಬೇಡ'-ಸಿದ್ದರಾಮಯ್ಯ

ಈಗ ಹೊಸದಾಗಿ ಮಂಡಿಸಿರುವ ಮಸೂದೆಯು ಮೂರು ನಾಗರಿಕ ಸಂಸ್ಥೆಗಳನ್ನು ಏಕ, ಸಂಯೋಜಿತ ಮತ್ತು ಸುಸಜ್ಜಿತ ಘಟಕವಾಗಿ ವಿಲೀನಗೊಳಿಸುವ ಗುರಿಯನ್ನು ಹೊಂದಿದ್ದು, ಕಾರ್ಯತಂತ್ರದ ಯೋಜನೆ ಮತ್ತು ಸಂಪನ್ಮೂಲಗಳ ಅತ್ಯುತ್ತಮ ಬಳಕೆಗಾಗಿ ದೃಢವಾದ ಕಾರ್ಯವಿಧಾನವನ್ನು ಖಚಿತಪಡಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಸದನದಲ್ಲಿ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು, ಆದರೆ ವಿರೋಧ ಪಕ್ಷದ ಸದಸ್ಯರು ಮಂಡಿಸಿದ ಹಲವಾರು ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು.

ಇದನ್ನೂ ಓದಿ: 'ಚುನಾವಣೆ ಶುದ್ಧೀಕರಣವಾದರೇ ಸಾಲದು, ಶೈಕ್ಷಣಿಕ, ಸಾಂಸ್ಕೃತಿಕ ರಂಗವೂ ಶುದ್ಧವಾಗಬೇಕು'

ಇದೇ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಅವರು ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ದೆಹಲಿಯಲ್ಲಿ ಮಹಾನಗರ ಪಾಲಿಕೆಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ.ಇದರಿಂದಾಗಿ ಅವು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಅಸಮರ್ಪಕ ಸಂಪನ್ಮೂಲಗಳೊಂದಿಗೆ ಹೋರಾಡುತ್ತಿವೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News