ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು ರದ್ದುಗೊಳಿಸಿದ ಸ್ಪೀಕರ್ ಓಂ ಬಿರ್ಲಾ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ನಾಲ್ವರು ಕಾಂಗ್ರೆಸ್ ಸಂಸದರ ಅಮಾನತನ್ನು ರದ್ದುಗೊಳಿಸಿದ್ದಾರೆ.

Last Updated : Aug 1, 2022, 05:37 PM IST
  • ಇದೇ ವೇಳೆ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಕುರ್ಚಿಗೆ ನೋವುಂಟು ಮಾಡುವುದು ಪ್ರತಿಪಕ್ಷಗಳ ಉದ್ದೇಶವಲ್ಲ ಎಂದು ಹೇಳಿದ್ದಾರೆ.
  • ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಕಳೆದ ಸೋಮವಾರ ಕಾಂಗ್ರೆಸ್ ಸದಸ್ಯರನ್ನು ಉಳಿದ ಅವಧಿಗೆ ಅಮಾನತುಗೊಳಿಸಲಾಗಿತ್ತು.
ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು ರದ್ದುಗೊಳಿಸಿದ ಸ್ಪೀಕರ್ ಓಂ ಬಿರ್ಲಾ  title=
file photo

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ನಾಲ್ವರು ಕಾಂಗ್ರೆಸ್ ಸಂಸದರ ಅಮಾನತನ್ನು ರದ್ದುಗೊಳಿಸಿದ್ದಾರೆ.

ಇದೇ ವೇಳೆ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಕುರ್ಚಿಗೆ ನೋವುಂಟು ಮಾಡುವುದು ಪ್ರತಿಪಕ್ಷಗಳ ಉದ್ದೇಶವಲ್ಲ ಎಂದು ಹೇಳಿದ್ದಾರೆ.ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಕಳೆದ ಸೋಮವಾರ ಕಾಂಗ್ರೆಸ್ ಸದಸ್ಯರನ್ನು ಉಳಿದ ಅವಧಿಗೆ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: WhatsApp Mistakes: ಅಪ್ಪಿತಪ್ಪಿಯೂ ಗ್ರೂಪ್‌ಗಳಿಗೆ ಈ 4 ವಿಷಯ ಕಳುಹಿಸಬೇಡಿ..!

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸದನದಲ್ಲಿ ಅಂಗೀಕಾರವನ್ನು ಮಂಡಿಸಿದ ನಂತರ ಮಾಣಿಕಂ ಟ್ಯಾಗೋರ್,ರಮ್ಯಾ ಹರಿದಾಸ್, ಟಿ ಎನ್ ಪ್ರತಾಪನ್ ಮತ್ತು ಎಸ್ ಜೋತಿಮಣಿ ಅವರ ಅಮಾನತು ರದ್ದುಗೊಳಿಸಲಾಯಿತು.

ಅಮಾನತನ್ನು ಹಿಂಪಡೆದ ನಂತರ,ಕಾಂಗ್ರೆಸ್ ಸದಸ್ಯ ಮನೀಶ್ ತಿವಾರಿ ಅವರು ಪ್ರಾರಂಭಿಸಿದ ಬೆಲೆ ಏರಿಕೆಯ ಬಗ್ಗೆ ಸದನವು ಚರ್ಚೆಯನ್ನು ಕೈಗೆತ್ತಿಕೊಂಡಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News