ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ- ಸಿದ್ದರಾಮಯ್ಯ

ತಮ್ಮ ಆಡಳಿತಾವಧಿಯಲ್ಲಿ ತಮಿಳುನಾಡಿನ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ಕೇವಲ ತಮಿಳುನಾಡಿಗಷ್ಟೇ ಅಲ್ಲದೆ, ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿ ತಮಿಳುನಾಡಿನ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ಕೇವಲ ತಮಿಳುನಾಡಿಗಷ್ಟೇ ಅಲ್ಲದೆ, ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ ಎಂದು ಅವರು ತಿಳಿಸಿದ್ದಾರೆ.
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಂ.ಕರುಣಾನಿಧಿಯವರು ಇಂದು ಸಂಜೆ ದೈವಾದೀನರಾಗಿರುವುದು ಆಘಾತದ ಜೊತೆಗೆ ನೋವುಂಟು ಮಾಡಿದೆ, ಮೃತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ದೇವರು ಕರುಣಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.