ನವದೆಹಲಿ: ಹೆಚ್ಚುವರಿ ನಿರ್ದೇಶಕ ಎಂ.ನಾಗೇಶ್ವರ ರಾವ್ ಅವರು ಕೇಂದ್ರ ತನಿಖಾ ದಳ (ಸಿಬಿಐ)ದ ಮಧ್ಯಂತರ ನಿರ್ದೇಶಕರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

1986 ರ ಬ್ಯಾಚ್ ಒಡಿಶಾ ಕೇಡರ್'ನ ಇಂಡಿಯನ್ ಪೊಲೀಸ್ ಸರ್ವಿಸ್ (ಐಪಿಎಸ್) ಅಧಿಕಾರಿಯಾದ ರಾವ್, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) ಆದೇಶದ ಅನುಸಾರ ಒಂದು ದಿನ ಮುಂಚಿತವಾಗಿ ಅಧಿಕಾರ ಸ್ವೀಕರಿಸಿದರು. ಮುಂದಿನ ನೇಮಕಾತಿಯವರೆಗೂ ನಾಗೇಶ್ವರ್ ರಾವ್ ಅವರು ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.


ಅಕ್ಟೋಬರ್‌ನಲ್ಲಿ ಅಲೋಕ್‌ ವರ್ಮಾರನ್ನು ಕಡ್ಡಾಯ ರಜೆಗೆ ಕಳುಹಿಸಿದ ಬಳಿಕ ಮಧ್ಯಂತರ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದ ನಾಗೇಶ್ವರ್‌ ರಾವ್‌ ಅವರು ಸುಪ್ರೀಂ ಕೋರ್ಟ್‌ ಆದೇಶದ ಬಳಿಕ ಮರಳಿದ್ದ ಅಲೋಕ್‌ ವರ್ಮಾರನ್ನು ಸಿಬಿಐ ಪ್ರಧಾನ ಕಚೇರಿಗೆ ವೈಯಕ್ತಿಕವಾಗಿ ಸ್ವಾಗತಿಸಿದ್ದರು. 


ಆದರೆ, ಸುಪ್ರೀಂ ತೀರ್ಪಿನ 48 ಗಂಟೆಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಸಮಿತಿ ಸಭೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿ ಅಗ್ನಿಶಾಮಕ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಿತ್ತು.