ನವದೆಹಲಿ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಅಳಿಯ ಸಂಜಯ್ ಸಿಂಗ್ ಮಸಾನಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ ಜ್ಯೋತಿರಾದಿತ್ಯ ಸಿಂಧಿಯಾ ಅವರ ಉಪಸ್ಥಿತಿಯಲ್ಲಿ ಶ್ರೀ ಚೌಹಾಣ್ ಪತ್ನಿ ಸಾಧನಾ ಅವರ ಸಹೋದರರಾದ ಇಂದು ಮಸಾನಿ ಔಪಚಾರಿಕವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.


ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಮಾತನಾಡಿದ ಮಸಾನಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಇದು ಸೂಕ್ತ ಸಮಯವೆಂದು ಅವರು ತಿಳಿಸಿದರು."ಮಧ್ಯ ಪ್ರದೇಶಕ್ಕೆ ಶಿವರಾಜ್ ಅವರ ಅಗತ್ಯವಿಲ್ಲ ಬದಲಾಗಿ ಆದರೆ ನಾಥ್ ಅಗತ್ಯವಿದೆ.ಚೈಂದ್ವಾರನ್ನು ಹೇಗೆ ಅಭಿವೃದ್ಧಿಪಡಿಸಲಾಗಿದೆ ಮತ್ತು ಅದನ್ನು ಕಮಲ್ ನಾಥ್ ಅವರ ಜೊತೆ ಹೇಗೆ ಗುರುತಿಸಲಾಗಿದೆ ಎಂದು ನಮಗೆ ತಿಳಿದಿದೆ ಎಂದು ಮಸಾನಿ ಕಮಲ್ ನಾಥ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 


ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಉದ್ಯಮದ ಕೊರತೆ ರಾಜ್ಯದ ಎರಡು ಪ್ರಮುಖ ಸಮಸ್ಯೆಗಳಾಗಿದ್ದು, ಚೌಹಾನ್ ಸರಕಾರವು ಈ ಎಲ್ಲಾ ವಿಭಾಗದಲ್ಲಿ ವಿಫಲವಾಗಿದೆ ಎಂದು ಅವರು ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅವರು ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.