ಮಧ್ಯಪ್ರದೇಶ: ಗ್ಯಾಂಗ್ ರೇಪ್ ಗೆ ಒಳಗಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ
ನವದೆಹಲಿ: ಮಧ್ಯಪ್ರದೇಶದ ಸಾಗರನಲ್ಲಿ ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈಗಾಗಲೇ ಪೊಲೀಸರು ಪ್ರಕರಣವನ್ನು ದಾಖಲಿಸಿ ಮತ್ತು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದ್ದು ಇನ್ನು ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಸದೇಂದ್ರ ಸಿಂಗ್ ಹೇಳುವಂತೆ " ಪ್ರಕರಣವನ್ನು ದಾಖಲಿಸಿ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಇನ್ನು ತನಿಖೆ ಮುಂದುವರೆದಿದೆ " ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅತ್ಯಾಚಾರ ಪ್ರಕರಣಗಳನ್ನು ಪರಿಗಣಿಸಿ , ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸುಪ್ರಿಮ್ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಕ ಫಾಸ್ಟ್ ಟ್ರಾಕ್ ಕೋರ್ಟ್ ಸ್ಥಾಪಿಸಬೇಕೆಂದು ವಿನಂತಿಸಿಕೊಂಡಿದ್ದರು.
ಮಧ್ಯಪ್ರದೇಶ ವಿಧಾನಸಭೆಯು ಕಳೆದ ವರ್ಷ ಡಿಸೆಂಬರ್ನಲ್ಲಿ 12 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಅತ್ಯಾಚಾರ ಮಾಡಿದ ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗುವ ಮಸೂಧೆಯೊಂದನ್ನು ಜಾರಿಗೆಗೊಳಿಸಿತ್ತು.