ಮಧುರೈ: 'ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಮೊದಲ ಹಿಂದೂ ಭಯೋತ್ಪಾದಕ' ಎಂಬ ಹೇಳಿಕೆ ನೀಡಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಗೆ ಮಧುರೈ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ನೀಡಿದೆ.


COMMERCIAL BREAK
SCROLL TO CONTINUE READING

ಇತ್ತೀಚೆಗೆ ವಿಧಾನಸಭೆ ಉಪಚುನಾವಣೆ ಸಂಬಂಧ ಅರವಕುರಿಚ್ಚಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ'' ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. 



ಇದನ್ನು ವಿರೋಧಿಸಿ ಬಲಪಂಥೀಯ ಕಾರ್ಯಕರ್ತರು 'ಧಾರ್ಮಿಕ ಭಾವನೆಗಳಿಗೆ ಪ್ರಚೋದನೆ' ಮತ್ತು 'ಎರಡು ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ' ನೀಡುತ್ತಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಕರೂರ್ ಜಿಲ್ಲೆಯ ಅರವಕುರಿಚ್ಚಿ ಪೊಲೀಸರು ಕಮಲ್ ಹಾಸನ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153ಎ ಮತ್ತು 295ಎ ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ.