Madurai: ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಬೆಂಕಿ ಅವಘಡ; 9 ಮಂದಿ ಸಾವು!
Madurai Train Fire: ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ
ಮಧುರೈ: ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನ ಖಾಸಗಿ ಬೋಗಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ ಕೆಲವರು ಕೋಚ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದರು. ಚಹಾ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ತನಿಖೆಯ ನಂತರವೇ ಈ ಬೆಂಕಿ ಅವಘಡದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಕೋಚ್‌ನಲ್ಲಿ ಸಿಲುಕಿರುವವರನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯವೂ ನಡೆಯುತ್ತಿದೆ.
ಖಾಸಗಿ ಬೋಗಿಗೆ ವ್ಯಾಪಿಸಿದ ಬೆಂಕಿ!
ಮುಂದಿನ ಎರಡು ದಿನಗಳವರೆಗೆ ಈ ಭಾಗದಲ್ಲಿ ಭಾರೀ ಮಳೆ ! ಜಲ ಪ್ರಳಯದ ಮುನ್ಸೂಚನೆ
ಮಧುರೈನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದಾಗ ರೈಲನ್ನು ನಿಲ್ಲಿಸಲಾಗಿತ್ತು. ಅಡುಗೆ ಮಾಡುವಾಗ ಬೆಂಕಿ ವ್ಯಾಪಿಸಿರಬಹುದೆಂದು ಅಗ್ನಿಶಾಮಕ ದಳ ಶಂಕಿಸಿದೆ. ಈ ಬೆಂಕಿ ಅವಘಡದ ಭಯಾನಕ ವಿಡಿಯೋವನ್ನು ಸಹಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ದೃಶ್ಯಗಳನ್ನು ನೋಡಿದ್ರೆ ಕೋಚ್‍ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ನೀವು ಕಾಣಬಹುದು.
ಶನಿವಾರ ಬೆಳಗ್ಗೆ 5.15ಕ್ಕೆ ಖಾಸಗಿ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲೇ ಬೆಂಕಿಯನ್ನು ನಿಯಂತ್ರಿಸಲು ಯತ್ನಿಸಲಾಯಿತು. ಆದರೆ ಬೆಂಕಿ ಕೆನ್ನಾಲಿಗೆಗೆ ಕೋಚ್ ಧಗಧಗನೇ ಹೊತ್ತಿ ಉರಿದಿದೆ. ಈ ಬೆಂಕಿ ಅವಘಡದಿಂದ ಬೇರೆ ಯಾವುದೇ ಕೋಚ್‍ಗೆ ಹಾನಿಯಾಗಿಲ್ಲ. ಬೆಂಕಿ ಹೊತ್ತಿಕೊಂಡ ಕೋಚ್ ಅನ್ನು ನಾಗರಕೋಯಿಲ್ ಜಂಕ್ಷನ್‌ನಲ್ಲಿ ಜೋಡಿಸಲಾಗಿದೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ ನಂತರ ಈ ಕೋಚ್ ಅನ್ನು ಮಧುರೈನಲ್ಲಿರುವ ಸ್ಟೇಬ್ಲಿಂಗ್ ಲೈನ್‌ನಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: ಇಂದಿನಿಂದ 3 ದಿನ ರಾಜ್ಯದ ಈ ಭಾಗಗಳಲ್ಲಿ ಬಿಡುವಿಲ್ಲದೆ ಸುರಿಯಲಿದೆ ಮಳೆ: ಪ್ರವಾಹ ಭೀತಿ, ಗುಡುಗು-ಸಿಡಿಲಿನ ಅಬ್ಬರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.