ನವದೆಹಲಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಉಳಿದಿರುವಾಗ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಂಗರಕ್ಷಕ ಶೇರಾ ಶುಕ್ರವಾರ ಶಿವಸೇನೆ ಸೇರಿದ್ದಾರೆ. ಶೆರಾ ಅವರ ನಿಜವಾದ ಹೆಸರು ಗುರ್ಮೀತ್ ಸಿಂಗ್.


COMMERCIAL BREAK
SCROLL TO CONTINUE READING

ಈ ಬಗ್ಗೆ ಶಿವಸೇನೆ ತನ್ನ ಅಧಿಕೃತ ಟ್ವಿಟರ್‌ನಲ್ಲಿ ತಿಳಿಸಿದೆ. ಶೆರಾ(ಗುರ್ಮೀತ್ ಸಿಂಗ್), ಅವರನ್ನು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಯುವಸೇನಾ ಅಧ್ಯಕ್ಷ ಆದಿತ್ಯ ಠಾಕ್ರೆ ಅವರು ಮುಂಬೈನ ತಮ್ಮ ನಿವಾಸವಾದ ಮಾತೋಶ್ರೀನಲ್ಲಿ ಶಿವಸೇನೆಗೆ ಸ್ವಾಗತಿಸಿದರು.



ಶೇರಾ ಈಗ ಹಲವಾರು ವರ್ಷಗಳಿಂದ ಸಲ್ಮಾನ್ ಜೊತೆ ಸಂಬಂಧ ಹೊಂದಿದ್ದಾರೆ. ಅವರು ಅವರ ಅತ್ಯಂತ ವಿಶ್ವಾಸಾರ್ಹ ಸಹಾಯಕರಲ್ಲಿ ಒಬ್ಬರು, ಈವೆಂಟ್‌ಗಳು, ಪಾರ್ಟಿಗಳು, ಕುಟುಂಬ ಕೂಟಗಳು ಮತ್ತು ಚಿತ್ರೀಕರಣ ಸಂದರ್ಭಗಳಲ್ಲಿ ಅವರು ಹಲವು ಬಾರಿ ಸೂಪರ್‌ಸ್ಟಾರ್‌ ಜೊತೆಗೆ ಗುರುತಿಸಿಕೊಂಡಿದ್ದಾರೆ.


ಶಿವಸೇನೆ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.


ಉದ್ಧವ್ ಠಾಕ್ರೆ ಅವರ ಹಿರಿಯ ಮಗ ಆದಿತ್ಯ ಅವರನ್ನು ಮುಂಬೈನ ವರ್ಲಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಆದಿತ್ಯ ಠಾಕ್ರೆ ಚುನಾವಣೆಯಲ್ಲಿ ಸ್ಪರ್ಧಿಸಿದ ಠಾಕ್ರೆ ಕುಟುಂಬದ ಮೊದಲ ಸದಸ್ಯ.


ಬಾಲ್ ಠಾಕ್ರೆ 1966 ರಲ್ಲಿ ಶಿವಸೇನೆ ಸ್ಥಾಪಿಸಿದಾಗಿನಿಂದ, ಕುಟುಂಬದ ಯಾವುದೇ ಸದಸ್ಯರು ಯಾವುದೇ ಚುನಾವಣೆಗೆ ಸ್ಪರ್ಧಿಸಿಲ್ಲ ಅಥವಾ ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿಲ್ಲ ಎಂಬುದು ಗಮನಾರ್ಥ.


ಮಹಾರಾಷ್ಟ್ರದ 288 ಸದಸ್ಯರ ವಿಧಾನಸಭೆ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಮತದಾನದಲ್ಲಿ ನಡೆಯಲಿದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.