ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಢದ ರೈತರ ಸಾಲ ಮನ್ನಾ ನಂತರ, ಮಹಾರಾಷ್ಟ್ರದ ರೈತರಿಗೆ ಸರ್ಕಾರ ಸಂತಸದ ಸುದ್ದಿಯೊಂದನ್ನು ನೀಡಿದೆ. ಮಹಾರಾಷ್ಟ್ರ ಕ್ಯಾಬಿನೆಟ್ ಈರುಳ್ಳಿ ರೈತರಿಗೆ 150 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದೆ. ವಾಸ್ತವವಾಗಿ, ಸರ್ಕಾರವು ನೀಡುವ ಪರಿಹಾರ ಪ್ಯಾಕೇಜ್ ರೈತರಿಗೆ ಅಗ್ಗದ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಪರಿಹಾರ ನೀಡುತ್ತದೆ. ಸರ್ಕಾರದ ಪರವಾಗಿ, ಈರುಳ್ಳಿ ಮಾರಾಟ ಮಾಡುವವರಿಗೆ ಡಿಸೆಂಬರ್ 1 ರಿಂದ 15 ರವರೆಗೆ ಪರಿಹಾರವಾಗಿ ಕ್ವಿಂಟಲ್ಗೆ 200 ರೂ. ನೀಡುವುದಾಗಿ ಘೋಷಿಸಿದೆ. ಮಹಾರಾಷ್ಟ್ರ ಸರಕಾರ ನೀಡಿದ ಪರಿಹಾರ ಪ್ಯಾಕೇಜ್ ಒಟ್ಟು 75 ಲಕ್ಷ ಮೆಟ್ರಿಕ್ ಟನ್ ಈರುಳ್ಳಿಗೆ ಸಾಕಾಗುತ್ತದೆ.


COMMERCIAL BREAK
SCROLL TO CONTINUE READING

ಮಹಾರಾಷ್ಟ್ರದ ಸರಕಾರದಿಂದ ಪರಿಹಾರ ಪ್ಯಾಕೇಜ್ ಘೋಷಿಸಿದ ನಂತರ, ರೈತರಿಗೆ ಹೆಚ್ಚಿನ ಪರಿಹಾರ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಾಲ ಮತ್ತು ಅಗ್ಗದ ದರದಲ್ಲಿ ಈರುಳ್ಳಿ ಮಾರಾಟದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ರೈತರು ಉತ್ತಮ ಬೆಳೆಗೆ ಉತ್ತಮ ಇಳುವರಿಯನ್ನು ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.


ಬುಧವಾರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯ ರೈತರ ಸಹಕಾರಿ ಬ್ಯಾಂಕುಗಳ ಎಲ್ಲ ಸಾಲಗಳನ್ನು ಮನ್ನಾ ಮಾಡಲಾಗುವುದು ಎಂದು ಹೇಳಿದರು. ಅದೇ ಸಮಯದಲ್ಲಿ, ವಾಣಿಜ್ಯ, ರಾಷ್ಟ್ರೀಯ ಮತ್ತು ಗ್ರಾಮೀಣ ಬ್ಯಾಂಕುಗಳಲ್ಲಿನ  ಎರಡು ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಮತ್ತೊಂದೆಡೆ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ಸರಕಾರ ಈಗಾಗಲೇ ಸಾಲ ಮನ್ನಾ ಘೋಷಿಸಿದೆ.