Coronavirus Cases In Maharashtra - ರಾಜ್ಯ ಆರೋಗ್ಯ ಇಲಾಖೆ ಜಾರಿಗೊಳಿಸಿರುವ ಅಂಕಿ ಅಂಶಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಕಳೆದ 24ಗಂಟೆಗಳಲ್ಲಿ 27, 126 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದಲ್ಲದೆ 92 ಜನರು ಈ ಮಾರಕ ಕಾಯಿಲೆಗೆ ಪ್ರಾಣಕಳೆದುಕೊಂಡಿದ್ದಾರೆ. ಇನ್ನೊಂದೆಡೆ 13,588 ಈ ಮಾರಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆಯ ಕುರಿತು ಹೇಳುವುದಾದರೆ, ರಾಜ್ಯದಲ್ಲಿ ಇದುವರೆಗೆ 24, 49, 147 ಜನರು ಈ ಸೋಂಕಿಗೆ ಗುರಿಯಾಗಿದ್ದಾರೆ. ಹಾಗೂ 53 ಸಾವಿರ ಜನರು ಸಾವನ್ನಪ್ಪಿದ್ದಾರೆ.
Maharashtra reports 27,126 new #COVID19 cases, 13,588 recoveries and 92 deaths in the last 24 hours.
Total cases 24,49,147
Total recoveries 22,03,553
Death toll 53,300Active cases 1,91,006 pic.twitter.com/RkwOd7VmWZ
— ANI (@ANI) March 20, 2021
ಇದನ್ನೂ ಓದಿ- ಮಹಿಳೆಯರೇ ಗಮನಿಸಿ! Corona Vaccine ನಿಮ್ಮ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರಲು ಕಾರಣ ಏನು ಗೊತ್ತೇ?
ಇದಕ್ಕೂ ಮೊದಲು ಶುಕ್ರವಾರ ಕೊವಿಡ್-19 ಸೋಂಕಿತರ ಸಂಖ್ಯೆ 25,681 ಕ್ಕೆ ತಲುಪಿತ್ತು. ಕಳೆದ ವರ್ಷ ಈ ಮಹಾಮಾರಿಯಾ ಆರಂಭದ ಬಳಿಕ ಒಂದೇ ದಿನದಲ್ಲಿ ಎರಡನೇ ಅತಿ ದೊಡ್ಡ ಸಂಖ್ಯೆ ಇದಾಗಿದೆ. ಮುಂಬೈ ನಲ್ಲಿ ಶುಕ್ರವಾರ ಕೊವಿಡ್ 19 ಸೋಂಕಿಗೆ ಗುರಿಯಾದ ಸುಮಾರು 3,062 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಿಂದ ಮುಂಬೈನ ಒಟ್ಟು ಪ್ರಕರಣಗಳ ಸಂಖ್ಯೆ 3,55,897 ಕ್ಕೆ ತಲುಪಿದೆ.
ಇದನ್ನೂ ಓದಿ- AstraZeneca ವ್ಯಾಕ್ಸಿನ್ ನಿಂದ ರಕ್ತ ಹೆಪ್ಪುಗಟ್ಟುವಿಕೆಯ ದೂರು, ಈ ದೇಶಗಳಲ್ಲಿ ಲಸಿಕೆ ಬಳಕೆಗೆ ಬ್ಯಾನ್
ಇನ್ನೊಂದೆಡೆ ಮಹಾರಾಷ್ಟ್ರದ ಮಂತ್ರಿಯಾಗಿರುವ ನಿತೀನ್ ರಾವುತ್, ನಾಗ್ಪುರನಲ್ಲಿ ಮಾರ್ಚ್ 31ರವರೆಗೆ ಲಾಕ್ ಡೌನ್ ವಿಸ್ತರಿಸುವ ಘೋಷಣೆ ಮಾಡಿದ್ದಾರೆ. ಆದರೆ, ಸ್ವಲ್ಪ ಸಡಿಲಿಕೆ ಕೂಡ ನೀಡಲಾಗಿದೆ. ಕೊವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯ ಬಳಿಕ 15 ರಿಂದ 21 ಮಾರ್ಚ್ ವರೆಗೆ ಜಿಲ್ಲೆಯಲ್ಲಿ ಕಠಿಣ ನಿರ್ಬಂಧನೆಯನ್ನು ವಿಧಿಸಲಾಗಿದೆ.
ಇದನ್ನೂ ಓದಿ-ಈ ದೇಶಗಳಲ್ಲಿ AstraZeneca Covid Vaccine ಬಳಕೆ ರದ್ದು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.