ನಾಳೆ ಬಹುಮತ ಸಾಬೀತಿಗೆ 'ಸುಪ್ರೀಂ' ಆದೇಶ, DCM ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ NCP ನಾಯಕ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Written by - Yashaswini V | Last Updated : Nov 26, 2019, 03:18 PM IST
ನಾಳೆ ಬಹುಮತ ಸಾಬೀತಿಗೆ 'ಸುಪ್ರೀಂ' ಆದೇಶ, DCM ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ title=
File Photo

ಮುಂಬೈ:ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ NCP ನಾಯಕ ಅಜಿತ್ ಪವಾರ್(Ajit Pawar) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಿ: 'ಮಹಾ' ಸರ್ಕಾರಕ್ಕೆ ಸುಪ್ರೀಂಕೋರ್ಟ್

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್(Devendra Fadnavis) ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು ಎಂದು ವರದಿಯಾಗಿದೆ. ಬುಧವಾರ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡೆಸಬೇಕೆಂಬ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಧ್ಯಾಹ್ನ 03.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಸಿಎಂ ತಮ್ಮ ರಾಜೀನಾಮೆಯನ್ನು ಪ್ರಕಟಿಸುವ ಸಾಧ್ಯತೆ ಇದೇ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಕುರಿತು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಮತ್ತು ಬಿಜೆಪಿ ಕಾರ್ಯನಿರ್ವಾಹಕ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿರಲಿದ್ದಾರೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತನ್ನ ಮಹತ್ವದ ಆದೇಶವನ್ನು ಪ್ರಕಟಿಸಿದೆ. ಶಿವಸೇನೆ(Shiv Sena), ಎನ್‌ಸಿಪಿ ಮತ್ತು ಕಾಂಗ್ರೆಸ್(Congress) ಸಲ್ಲಿಸಿದ್ದ ಜಂಟಿ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠ, ಹಾಗಾಗಿ ಆದಷ್ಟು ಬೇಗ ಬಹುಮತ ಸಾಬೀತು ಪಡಿಸಬೇಕು ಎಂಬ ಮಹತ್ವದ ಆದೇಶ ಹೊರಡಿಸಿದರು. ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಬೇಕು ಎಂದು ತೀರ್ಪು ಪ್ರಕಟಿಸಿದ ತ್ರಿಸದಸ್ಯ ಪೀಠ, ಗೌಪ್ಯ ಮತದಾನ ನಡೆಯಬಾರದು ಹಾಗೂ ಬಹುಮತ ಸಾಬೀತು ಪ್ರಕ್ರಿಯೆ ನೇರಪ್ರಸಾರವಾಗಬೇಕು ಎಂಬ ಮಹತ್ವದ ಆದೇಶ ನೀಡಿದೆ. ಜೊತೆಗೆ ಹಂಗಾಮಿ ಸ್ಪೀಕರ್ ನೇಮಕ ಮಾಡುವಂತೆ ನ್ಯಾಯಾಲಯ ನಿರ್ದೇಶಿಸಿತ್ತು. 

ಇಂದು ಮಹತ್ವದ ತೀರ್ಪು ಪ್ರಕಟಿಸಿದ ನ್ಯಾ. ರಮಣ ನೇತೃತ್ವದ ಪೀಠ, ನ್ಯಾಯಾಲಯ ಮತ್ತು ಶಾಸಕಾಂಗದ ಅಧಿಕಾರದ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಬೇಕು ಮತ್ತು ಜನರಿಗೆ ಉತ್ತಮ ಆಡಳಿತದ ಹಕ್ಕಿದೆ. ಈ ಪ್ರಕರಣವು ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಸಾಂವಿಧಾನಿಕ ವಿಷಯವನ್ನು ಎತ್ತಿದೆ ಎಂದು ತಿಳಿಸಿತು. ಈ ಹಿಂದಿನ  ಕರ್ನಾಟಕ ಮತ್ತು ಉತ್ತರಾಖಂಡದ ಪ್ರಕರಣಗಳನ್ನೂ ಪೀಠವು ಉಲ್ಲೇಖಿಸಿತು. 

ಸುಪ್ರೀಂ ಕೋರ್ಟ್‌ನ ಆದೇಶದ ನಂತರ, ಬಹುಮತ ಸಾಬೀತಾಗುವವರೆಗೂ ದೇವೇಂದ್ರ  ಫಡ್ನವೀಸ್ ಸರ್ಕಾರವು ನೀತಿ ನಿರ್ಧಾರ ಅಥವಾ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳದಂತೆ ತಡೆಯಬೇಕು ಎಂದು ನ್ಯಾಯಾಧೀಶ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ, ಇದರ ಬಗ್ಗೆ ನ್ಯಾಯಾಲಯ ಯಾವುದೇ ಆದೇಶ ಹೊರಡಿಸಿಲ್ಲ. 

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಾತನಾಡಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್, ಈ ಆದೇಶವು ಒಂದು ಮೈಲಿಗಲ್ಲು ಎಂದು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ. ಸಂವಿಧಾನ ದಿನದಂದು ಸಂವಿಧಾನವು ಗೆದ್ದಿದೆ ಎಂದು ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚವಾಣ್ ಹೇಳಿದ್ದಾರೆ. ದೇವೇಂದ್ರ ಫಡ್ನವೀಸ್ ಅವರು ತಕ್ಷಣ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ ನಾಯಕ ಶಹನಾವಾಜ್ ಹುಸೇನ್ ಹೇಳಿದ್ದಾರೆ. 

Trending News