Ahmednagar Fire Accident - ಮಹಾರಾಷ್ಟ್ರದ (Maharashtra) ಅಹಮದ್‌ನಗರ ಜಿಲ್ಲಾ ಆಸ್ಪತ್ರೆಯಿಂದ (District Hospital) ಅಹಿತಕರ  ಸುದ್ದಿಯೊಂದು ವರದಿಯಾಗಿದೆ. ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ (Intensive Care Unit) ಇಂದು ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತು ರೋಗಿಗಳು ಸುಟ್ಟು ಕರಕಲಾದ ಘಟನೆ (Fire Accident) ನಡೆದಿದೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯನ್ನು ಅಹಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ (Rajendra Bhonsle) ಖಚಿತಪಡಿಸಿದ್ದಾರೆ. ಸಿವಿಲ್ ಆಸ್ಪತ್ರೆಯ ಕರೋನಾ ವಾರ್ಡ್‌ನಲ್ಲಿ (Corona Ward) ಈ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಹತ್ತು ಕರೋನಾ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ (Fire Accident) ಎಂದು ಅಹ್ಮದ್‌ನಗರ ಮುನ್ಸಿಪಲ್ ಕಾರ್ಪೊರೇಷನ್ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಶಂಕರ್ ಮಿಸಳ್ (Shankar Misal) ತಿಳಿಸಿದ್ದಾರೆ. ಸದ್ಯಕ್ಕೆ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಮಾಧಾನಕರ ಸುದ್ದಿ ಎಂದರೆ ಪ್ರಸ್ತುತ  ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಗಿದೆ. ಆರಂಭಿಕ ತನಿಖೆಯಲ್ಲಿ ಬೆಂಕಿಗೆ ಶಾರ್ಟ್ ಸರ್ಕ್ಯೂಟ್‌ ಕಾರಣ ಎನ್ನಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ. 


3300GB ಉಚಿತ ಡೇಟಾ ಹಾಗೂ ಉಚಿತ ಕರೆ ನೀಡುವ ಅಗ್ಗದ ಪ್ಲಾನ್ ಗಳು, ಆರಂಭಿಕ ಬೆಲೆ ರೂ.400


ಮಹಾರಾಷ್ಟ್ರದ ವಿರೋಧ ಪಕ್ಷದ ಮುಖಂಡ  ದೇವೇಂದ್ರ ಫಡ್ನವೀಸ್ (Devendra Fadnavis) ಅವರು ಟ್ವೀಟ್ ಮಾಡುವ ಮೂಲಕ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಹ್ಮದ್‌ನಗರದಿಂದ ತುಂಬಾ ಆಘಾತಕಾರಿ ಮತ್ತು ನೋವು ನೀಡುವ ಸುದ್ದಿ ಇದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಮುನ್ಸಿಪಲ್ ಸಿವಿಲ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಾಂತ್ವನ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. 


Aryan Khan Drugs Case ಸೇರಿದಂತೆ ಒಟ್ಟು 6 ಪ್ರಕರಣಗಳ ತನಿಖೆ SITಗೆ ಹಸ್ತಾಂತರ


ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ನಂತರ ಅಲ್ಲಲ್ಲಿ  ಕೋಲಾಹಲ ಸೃಷ್ಟಿಯಾಗಿದೆ. ಆಸ್ಪತ್ರೆಯಲ್ಲಿದ್ದವರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಸಿಕ್ಕಲ್ಲೆಲ್ಲಾ  ಓಡುತ್ತಿರುವುದು ಕಂಡು ಬಂತು. ಸುದ್ದಿ ಸಂಸ್ಥೆ ಎಎನ್‌ಐ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಈ ಘಟನೆ ಎಷ್ಟು ಭೀಕರವಾಗಿತ್ತು ಎಂಬುದನ್ನು ಊಹಿಸಬಹುದು. ಆಸ್ಪತ್ರೆಯ ವಾರ್ಡ್ ಸಂಪೂರ್ಣ ಸುಟ್ಟು ಬೂದಿಯಾಗಿ ಕಾಣುತ್ತಿದೆ. ಅಪಘಾತದ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಲಿದೆ. 


ಇದನ್ನೂ ಓದಿ-ಪಡಿತರಾದಾರರಿಗೆ ಬಿಗ್ ಶಾಕ್ : ಇಂದಿನಿಂದ ಉಚಿತ ಪಡಿತರ ಯೋಜನೆ ಬಂದ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ