ಮುಂಬೈ : 100 ಕೋಟಿ ವಸೂಲಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ (Anil Deshmukh) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದಕ್ಕೂ ಮುನ್ನ ಇಡಿ ಸೋಮವಾರ ಅನಿಲ್ ದೇಶಮುಖ್ ಅವರನ್ನು ವಿಚಾರಣೆಗೆ ಕರೆದಿತ್ತು. 12 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿ, ನಂತರ ಅನಿಲ್ ದೇಶಮುಖ್ ಅವರನ್ನು ಬಂಧಿಸಿತ್ತು. ಮೂಲಗಳ ಪ್ರಕಾರ, ಅನಿಲ್ ದೇಶಮುಖ್ ಇಡಿ (ED) ಕೇಳಿದ ಪ್ರಶ್ನೆಗಳಿಗೆ ತೃಪ್ತಿಕರ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ ಮತ್ತು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪವೂ ಇದೆ.


COMMERCIAL BREAK
SCROLL TO CONTINUE READING

ಅನಿಲ್ ದೇಶಮುಖ್‌ಗೆ ರಿಮಾಂಡ್ ಕೋರಲಿರುವ ಇಡಿ :
ಜಾರಿ ನಿರ್ದೇಶನಾಲಯ ಇಂದು ಅನಿಲ್ ದೇಶ್‌ಮುಖ್ (Anil Deshmukh) ಅವರನ್ನು ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ವಶಕ್ಕೆ ಕೋರಲಿದೆ.  ಆದರೆ, ಈ ಬಂಧನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಅನಿಲ್ ದೇಶಮುಖ್ ಪರ ವಕೀಲರು ಹೇಳಿದ್ದಾರೆ.


ಇದನ್ನೂ ಓದಿ : ಕಾನ್ಪುರದಲ್ಲಿ 10 ಝಿಕಾ ವೈರಸ್ ಪ್ರಕರಣಗಳು ವರದಿ


ಮಾಜಿ ಪೊಲೀಸ್ ಆಯುಕ್ತ ಪರಂಬಿರ್ ಸಿಂಗ್ ಆರೋಪ : 
ಅನಿಲ್ ದೇಶ್‌ಮುಖ್  ಅವರು 100 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು, ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್  (Param beer Singh) ಆರೋಪಿಸಿದ್ದರು. 100 ಕೋಟಿ ರೂಪಾಯಿ ವಸೂಲಿ ಮಾಡಿರುವ ಆರೋಪ ಮಾಡಿ, ಪರಂಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav thackeray) ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಸಂಪೂರ್ಣ ವಿಷಯವು ಮುನ್ನೆಲೆಗೆ ಬಂದಿತ್ತು. ನಂತರ ಈ ಆರೋಪದ ಹಿನ್ನೆಲೆಯಲ್ಲಿ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  


ಮೊದಲ 5 ಸಮನ್ಸ್ ಗೆ ಉತ್ತರಿಸದ ಅನಿಲ್ ದೇಶಮುಖ್  : 
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಮ್ಮ ವಕೀಲರೊಂದಿಗೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ನಿನ್ನೆ ಬೆಳಿಗ್ಗೆ 11.40 ರ ಸುಮಾರಿಗೆ ಹಾಜರಾಗಿದ್ದರು. ಇದಕ್ಕೂ ಮೊದಲು, ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ಇಡಿ ಮುಂದೆ ಹಾಜರಾಗಿರಲಿಲ್ಲ. ಆದರೆ ಕಳೆದ ವಾರ ಬಾಂಬೆ ಹೈಕೋರ್ಟ್ (Bombay  High Court) ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ನಂತರ ಅವರು ಏಜೆನ್ಸಿಯ ಮುಂದೆ ಹಾಜರಾಗಿದ್ದರು.


ಇದನ್ನೂ ಓದಿ : ಕಾಶ್ಮೀರ ಕಣಿವೆಗೆ ಹೋಗುವ ಪ್ರವಾಸಿಗರಿಗೆ ಇಲ್ಲೊಂದು ಸಂತಸದ ಸುದ್ದಿ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.