Maharashtra Politics: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕ ಭಾರಿ ಯಶಸ್ಸಿನ ಬಳಿಕ ಇದೀಗ ಮಹಾರಾಷ್ಟ್ರದಲ್ಲಿಯೂ ಕೂಡ ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಭಾರಿ ಹಲ್ಚಲ್ ನಡೆದಿದೆ. ಏತನ್ಮಧ್ಯೆ, ಭಾನುವಾರ (ಮೇ 14), ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮಹಾನಾಯಕ ಶರದ್ ಪವಾರ್ ಅವರ ಮನೆಯಲ್ಲಿ ಮಹಾ ವಿಕಾಸ್ ಅಘಾಡಿಯ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಸೀಟು ಹಂಚಿಕೆ ಕುರಿತು ಪ್ರಾಥಮಿಕ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಗ್ಗಟ್ಟಿನಿಂದ ಕೆಲಸ ಮಾಡಲು ನಿರ್ಧರಿಸಲಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 


COMMERCIAL BREAK
SCROLL TO CONTINUE READING

ಎನ್‌ಸಿಪಿಯಿಂದ ಅಜಿತ್ ಪವಾರ್, ಜಯಂತ್ ಪಾಟೀಲ್, ಉದ್ಧವ್ ಠಾಕ್ರೆ, ಶಿವಸೇನೆ (ಯುಬಿಟಿ)ನ ಸಂಜಯ್ ರಾವುತ್ ಮತ್ತು ಕಾಂಗ್ರೆಸ್‌ನಿಂದ ನಾನಾ ಪಟೋಲೆ, ಅಶೋಕ್ ಚವಾಣ್ ಮತ್ತು ಬಾಳಾಸಾಹೇಬ್ ಥೋರಾತ್ ಅವರಿಗೆ ಮುಂದಿನ ಮಾತುಕತೆಯ ಜವಾಬ್ದಾರಿಯನ್ನು ವಹಿಸಲಾಗಿದೆ.


'ಏಕತೆಯಲ್ಲಿ ಬಲ' ಸೂತ್ರದ ಮೇಲೆ ಕೆಲಸ ಮಾಡಲು ಒಪ್ಪಿಗೆ 
ಲೋಕಸಭೆ ಚುನಾವಣೆಗೆ ಕೇವಲ 10 ತಿಂಗಳು ಮಾತ್ರ ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಒಗ್ಗಟ್ಟಿನಲ್ಲಿ ಬಲವಿದೆ, ಈ ಸೂತ್ರದಲ್ಲಿ ಕೆಲಸ ಮಾಡಲು ನಿರ್ಧರಿಸಲಾಗಿದೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮೂರೂ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ಸಭೆಯಲ್ಲಿ ಒಪ್ಪಿಗೆ ಸೂಚಿಸಿವೆ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಗಳನ್ನು ಒಪ್ಪಿಕೊಳ್ಳುತ್ತದೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.


ಇದನ್ನೂ ಓದಿ-Maharashtra Violence: ಅಕೋಲಾ ಬಳಿಕ ಇದೀಗ ಅಹ್ಮದ್ ನಗರದಲ್ಲಿ ಭುಗಿಲೆದ್ದ ಹಿಂಸಾಚಾರ


ಕರ್ನಾಟಕದ ಫಲಿತಾಂಶ ಉತ್ಸಾಹ ಹೆಚ್ಚಿಸಿದೆ - ಪಾಟೀಲ್
ಸಭೆಯ ಬಳಿಕ ಮಾತನಾಡಿದ ಜಯಂತ್ ಪಾಟೀಲ್, ಕರ್ನಾಟಕದ ಫಲಿತಾಂಶದಿಂದ ನಾವೆಲ್ಲರೂ ಉತ್ಸುಕರಾಗಿದ್ದೇವೆ ಮತ್ತು ನಮ್ಮ ಆತ್ಮವಿಶ್ವಾಸ ಹೆಚ್ಚಾಗಿದೆ. ಈಗ ನಮ್ಮ ಕಾರ್ಯಕರ್ತರು ಹೆಚ್ಚು ಉತ್ಸಾಹದಿಂದ ಸಾರ್ವಜನಿಕರ ನಡುವೆ ಹೋಗಲಿದ್ದಾರೆ. ಸೋಲು ಆಗುತ್ತದೆ ಆದರೆ ಬಿಜೆಪಿ ಹೀನಾಯ ಸೋಲು ಕಂಡಿರುವ ರೀತಿ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸಾರ್ವಜನಿಕರಿಗೆ ತಿಳಿಸುತ್ತೇವೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.


ಇದನ್ನೂ ಓದಿ-ಇನ್ನೊಂದು ವರ್ಷದಲ್ಲಿ ಲೋಕಸಭೆ ಸೇರಿ 8 ವಿಧಾನಸಭೆಗೆ ಚುನಾವಣೆ : ಕರ್ನಾಟಕ ಫಲಿತಾಂಶದ ನಂತರ ಬದಲಾಗುತ್ತಿದೆ ಲೆಕ್ಕಾಚಾರ


ಉದ್ಧವ್ ಠಾಕ್ರೆ, ಅಜಿತ್ ಪವಾರ್, ನಾನಾ ಪಟೋಲೆ, ಸುಪ್ರಿಯಾ ಸುಳೆ ಸೇರಿದಂತೆ ಹಲವು ದೊಡ್ಡ ನಾಯಕರು ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಅಘಾಡಿ ಘಟಕಗಳ ಸಭೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ