Maharashtra Rain Updates: ಮಹಾರಾಷ್ಟ್ರದಲ್ಲಿ (Maharashtra) ಮಳೆಯ ಅಬ್ಬರ ಮುಂದುವರೆದದ್ದು, ಹಲವರು ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮಹಾರಾಷ್ಟ್ರದ ಕರಾವಳಿ ತೀರದ ರಾಯಗಡ್ ಜಿಲ್ಲೆಯ ತಲಾಯಿಗಾವ್ ಹತ್ತಿರ ಸಂಭವಿಸಿದ್ದ ಭೂಕುಸಿತದಲ್ಲಿ ಇದುವರೆಗೆ ಸುಮಾರು 49 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಇದುವರೆಗೆ ಸುಮಾರು 47 ಜನ ನಾಪತ್ತೆಯಾಗಿದ್ದಾರೆ. ಪ್ರಸ್ತುತ 12 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಸಂಪೂರ್ಣ ಮಹಾರಾಷ್ಟ್ರದ ಬಗ್ಗೆ ಹೇಳುವುದಾದರೆ ಕಳೆದ ಎರಡು ದಿನಗಳಲ್ಲಿ ಭಾರಿ ಮಳೆಗೆ ಸುಮಾರು 136 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ರಾಯಗಡ್ ಜಿಲ್ಲೆಯ ಮಹಾಡ ತಾಲೂಕಿನಲ್ಲಿರುವ ತಲೈ ಗ್ರಾಮದಲ್ಲಿ (Taliye Village Landslide) ಗುರುವಾರ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು,  ಭೂಕುಸಿತ ಸಂಭವಿಸಿದ ಸ್ಥಳದಿಂದ ಇದುವರೆಗೆ ಸುಮಾರು 49 ಶವಗಳನ್ನು ಹೊರತೆಗೆಯಲಾಗಿದೆ. ರಾಷ್ಟ್ರೀಯ ವಿಪತ್ತುನಿರ್ವಹಣಾ ಪಡೆ (NDRF), ಸ್ಥಳೀಯ ವಿಪತ್ತು ನಿರ್ವಹಣಾ ತಂಡ, ಪೊಲೀಸ್ ಮತ್ತು ಜಿಲ್ಲಾಡಳಿತದ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಭೂಕುಸಿತದ ಘಟನೆ ಗುರುವಾರ ಸಂಜೆ ತಡವಾಗಿ ವರದಿಯಾಗಿದೆ ಎಂದು ರಾಯಗಡ್ ಜಿಲ್ಲಾಧಿಕಾರಿ ನಿಧಿ ಚೌಧರಿ ತಿಳಿಸಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ, '"ಭಾರಿ ಪ್ರವಾಹ ಮತ್ತು ಕೇಸರಿನಿಂದಾಗಿ ಅಪಘಾತ ಸ್ಥಳಕ್ಕೆ ಹೋಗುವ ರಸ್ತೆಗಳನ್ನು ನಿರ್ಬಂಧಿಸಲಾಗಿದೆ, ಹೀಗಾಗಿ ಪರಿಹಾರ ಮತ್ತು ರಕ್ಷಣಾ ತಂಡಗಳಿಗೆ ಸ್ಥಳವನ್ನು ತಲುಪಲು ತೊಂದರೆ ಎದುರಾಗುತ್ತಿದೆ. ಶುಕ್ರವಾರ ಬೆಳಗ್ಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮತ್ತೆ ಆರಂಭಿಸಲಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳ ಪ್ರಕಾರ, ಈ ಘಟನೆಯಲ್ಲಿ ಗ್ರಾಮದ ಸುಮಾರು 30 ಮನೆಗಳಿಗೆ ಸಂಪೂರ್ಣ ಹಾನಿಗೊಳಗಾಗಿವೆ ಎನ್ನಲಾಗಿದೆ. 


ಇನ್ನೊಂದೆಡೆ ಘಟನೆಯ  ಕುರಿತು ಮಾತನಾಡಿರುವ ಗ್ರಾಮಸ್ಥರು ಸರ್ಕಾರದಿಂದ ತಮಗೆ ಯಾವುದೇ ಮುನ್ನೆಚ್ಚರಿಕೆ ಬಂದಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ಬುಡಕಟ್ಟು ಜನವಸತಿಯಲ್ಲಿ 120 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ 45 ಮನೆಗಳಿವೆ. ಭೂಕುಸಿತದಲ್ಲಿ, ಬೆಟ್ಟದಿಂದ 100 ಅಡಿ ಎತ್ತರದಿಂದ ಬಂಡೆಗಳು ಉರುಳಿವೆ, 90 ಗ್ರಾಮಸ್ಥರು ಅವಶೇಷಗಳ ಅಡಿಯಲ್ಲಿ ಸಿಲುಕಿ ಹಾಕಿಕೊಂಡಿರುವ ಸಾಧ್ಯತೆ ಇದೆ ಎಂದು ಅವರು ಅಂದಾಜು ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ, ಭೂಕುಸಿತದಲ್ಲಿ ಮೃತಪಟ್ಟವರ ರಕ್ತಸಂಬಂಧಿಗಳಿಗೆ ಮಹಾರಾಷ್ಟ್ರ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.


ಇದನ್ನೂ ಓದಿ- Maharashtra Flooding: Raigad ಜಿಲ್ಲೆಯಲ್ಲಿ 11 ರೋಗಿಗಳ ಸಾವು


ಪ್ರಸ್ತುತ ರಾಜ್ಯದ ಜನರಿಗೆ ಮಳೆಯಿಂದ ನೆಮ್ಮದಿ ಸಿಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಏಕೆಂದರೆ, ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ ಒಟ್ಟು 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಗೊಳಿಸಲಾಗಿದ್ದು, ಈ ಆರು ಜಿಲ್ಲೆಗಳು ಮುಂಚಿನಿಂದಲೇ ಭಾರಿ ಮಳೆಗೆ ಸಿಲುಕಿವೆ. IMD "ಅತ್ಯಂತ ಭಾರಿ ಮಳೆಯ" ಮುನ್ಸೂಚನೆ ನೀಡಿದೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಿಫಾರಸು ಮಾಡಿದೆ. ಕರಾವಳಿ ಕೊಂಕಣ ಪ್ರದೇಶದಲ್ಲಿ ರಾಯ್ಗಡ್, ರತ್ನಾಗಿರಿ ಮತ್ತು ಸಿಂಧುದುರ್ಗ್ ಜಿಲ್ಲೆಗಳಿಗೆ ಮಾತ್ರವಲ್ಲದೆ ಮುಂದಿನ 24 ಗಂಟೆಗಳ ಕಾಲ ಪಶ್ಚಿಮ ಮಹಾರಾಷ್ಟ್ರದ ಪುಣೆ, ಸತಾರಾ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸದ್ದು ಮಾಡಿದೆ.


ಇದನ್ನೂ ಓದಿ-Maharashtra Rain Updates: ರಾಯಗಡ್ ಭೂಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ, ಇಲ್ಲಿವೆ ಅಪ್ಡೇಟ್ಸ್


ಮಳೆ ಸಂಬಂಧಿತ ಘಟನೆಗಳಲ್ಲಿ ಉಂಟಾದ ಪ್ರಾಣಹಾನಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi), ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ (CM Uddhav Thackeray) ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ. 'ಮಹಾರಾಷ್ಟ್ರದ ರಾಯ್‌ಗಡ್‌ನಲ್ಲಿ ಭೂಕುಸಿತದಿಂದಾಗಿ ಪ್ರಾಣಹಾನಿ ಸಂಭವಿಸಿರುವುದಕ್ಕೆ ಬೇಸರವಾಗಿದೆ 'ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ. 'ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರು  ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಉದ್ಭವಿಸುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸಂತ್ರಸ್ತರಿಗೆ ನೆರವು ನೀಡಲಾಗುತ್ತಿದೆ' ಎಂದು ಪ್ರಧಾನಿಗಳು ಹೇಳಿದ್ದಾರೆ. 


ಇದನ್ನೂ ಓದಿ-Maharashtra Rain: ಮಹಾರಾಷ್ಟ್ರದಲ್ಲಿ ಮುಂದುವರೆದ ವರುಣನ ಆರ್ಭಟ, ಹಲವು ಜಿಲ್ಲೆಗಳು ಜಲಾವೃತ್ತ, ರಕ್ಷಣಾ ಕಾರ್ಯಾಚರಣೆಗಿಳಿದ Army, NDRF


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ