ಮುಂಬೈ: Maharashtra Rain - ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಾಡಿಗಳು ಉಕ್ಕಿ ಹರಿಯುತ್ತಿವೆ ಹಾಗೂ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಭಾರಿ ಮಳೆಗೆ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈಲು ಹಾಗೂ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ರಾಜ್ಯದ ಅಧಿಕಾರಿಗಳಿಗೆ ನೆರವು ನೀಡಲು ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ.
ರಾಯಗಡ್ ನಲ್ಲಿ ಭೂ ಕುಸಿತದಿಂದ (Raigad Landslide) 5 ಜನರ ಸಾವು
ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಿಂದ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಲ್ಲಿ ಇದುವರೆಗೆ ಸುಮಾರು 15 ಜನರನ್ನು ರಕ್ಷಿಸಲಾಗಿದ್ದು, ಇನ್ನೂ 30 ಜನರು ಸಿಲುಕಿಗೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಾಯಗಡ್ ಜಿಲ್ಲಾಧಿಕಾರಿ ನಿಧಿ ಚೌಧರಿ, ಭೂ ಕುಸಿತ ಹಾಗೂ ಪ್ರವಾಹದಿಂದಾಗಿ ಐವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಪ್ರಸ್ತುತ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಸಾಗುತ್ತಿದೆ ಹಾಗೂ ಕಾಣೆಯಾಗಿರುವವರಿಗಾಗಿ ಹುಡುಕು ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಮೂರು ದಿನಗಳವರೆಗೆ ಭಾರಿ ಮಳೆಯ ಎಚ್ಚರಿಕೆ
ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈ ಸೇರಿದಂತೆ ಕೊಂಕಣದ ಸಂಪೂರ್ಣ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ವಿವಿಧ ಕಡೆಗಳಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಮುಂದಿನ ಎರಡು ದಿನಗಳವರೆಗೆ ಅಂದರೆ ಜುಲೈ 24 ಮತ್ತು 25 ರವರೆಗೆ ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ-Mumbai: ಮುಂಬೈನಲ್ಲಿ ಭಾರೀ ಮಳೆ ಮಧ್ಯೆ ಕಟ್ಟಡ ಕುಸಿದು ಮೂವರ ಮೃತ್ಯು, 7 ಮಂದಿಗೆ ಗಾಯ
ಕೊಂಕಣ್ ವಿಭಾಗದಲ್ಲಿ ಭಾರಿ ಮಳೆಯ ಕಾರಣ ಸಿಲುಕಿಕೊಂಡ 6000 ಪ್ರಯಾಣಿಕರು
ಕೊಂಕಣ ರೈಲ್ವೆ ಮಾರ್ಗದಲ್ಲಿನ ರೈಲು ಸೇವೆಗಳಿಗೆ ಭಾರಿ ಮಳೆ ಮತ್ತು ನದಿಗಳ ಪ್ರವಾಹದಿಂದಾಗಿ ಅಡಚಣೆ ಉಂಟಾಗಿದ್ದು, ಸುಮಾರು 6,000 ಪ್ರಯಾಣಿಕರು ಸಿಲುಕಿ ಹಾಕಿಕೊಂಡಿದ್ದಾರೆ. ಮಳೆ ಪೀಡಿತ ಕೊಂಕಣ ರೈಲ್ವೆ ಮಾರ್ಗದಿಂದಾಗಿ ಇದುವರೆಗೆ ಒಂಬತ್ತು ರೈಲುಗಳ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಕೊಂಕಣ-ಗೋವಾ ಮತ್ತು ಮಹಾರಾಷ್ಟ್ರದ ರಾಯಗಡ್, ರತ್ನಗಿರಿ, ಸಿಂಧುದುರ್ಗ್, ಪುಣೆ ಘಾಟ್ ಪ್ರದೇಶಗಳು, ಸಾತಾರಾ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದ್ದು, ಅನೇಕ ಭಾಗಗಳಲ್ಲಿ ಪ್ರವಾಹ ಸ್ಥಿತಿ (Flood Situation) ಉಂಟಾಗಿದೆ. ಇಂದೂ ಕೂಡ ಈ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ-Coronaದಿಂದ 50 ಲಕ್ಷ ಸಾವುಗಳ ವರದಿ ಆಧಾರರಹಿತ, ಸಿಸ್ಟಂ ತುಂಬಾ ಸದೃಢವಾಗಿದೆ ಎಂದ ಕೇಂದ್ರ ಸರ್ಕಾರ
ಕೊಲ್ಹಾಪುರ್-ಬೆಂಗಳೂರು ಹೆದ್ದಾರಿ ಬಂದ್
ಮಹಾರಾಷ್ಟ್ರದ ಕೊಲ್ಹಾಪುರದ ನಿಪ್ಪಾಣಿ ಜಲಾವೃತ್ತವಾದ ಕಾರಣ ಕೊಲ್ಹಾಪುರ-ಬೆಂಗಳೂರು ಹೆದ್ದಾರಿ ಮುಚ್ಚಲಾಗಿದೆ. ರಾಯ್ಗಡ್, ರತ್ನಾಗಿರಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಹಲವಾರು ನದಿಗಳು ಅಪಾಯದ ಮಟ್ಟಕ್ಕಿಂತ ಮೇಲಕ್ಕೆ ಹರಿಯುತ್ತಿವೆ ಮತ್ತು ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಾತಾರಾ , ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಎನ್‌ಡಿಆರ್‌ಎಫ್ ಘಟಕಗಳನ್ನು ತೆರೆಯಲಾಗಿದೆ.
ಇದನ್ನೂ ಓದಿ-ತನ್ನ Chrome ಬ್ರೌಸರ್ ಬಳಕೆದಾರರಿಗೆ ಎರಡು ನೂತನ ವೈಶಿಷ್ಟ್ಯ ಪರಿಚಯಿಸಿದ ಗೂಗಲ್ ಕ್ರೋಮ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ