ಮಹೋಬಾ: ಉತ್ತರ ಪ್ರದೇಶದ ಮಹೋಬಾ ಜಿಲ್ಲಾ ನ್ಯಾಯಾಲಯವು ಅತ್ಯಾಚಾರ ಪ್ರಕರಣವೊಂದರ ವಿಚಾರಣೆಯನ್ನು ಒಂಬತ್ತು ದಿನಗಳಲ್ಲಿ ಮುಕ್ತಾಯಗೊಳಿಸಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.


COMMERCIAL BREAK
SCROLL TO CONTINUE READING

ಪೊಲೀಸರ ಪ್ರಕಾರ, 2019 ರ ಅಕ್ಟೋಬರ್ 5 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಆಕೆಯನ್ನು ಚಿತ್ರಕೂಟ್ ಗೆ ಕರೆದೊಯ್ದುವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಕಬ್ರೈ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.


ನವೆಂಬರ್ 6 ರಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಲ್ಲಿ ಸೆಕ್ಷನ್ 363, 366, 376, ಮತ್ತು 323 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.


ಈ ಪ್ರಕರಣದಲ್ಲಿ ನವೆಂಬರ್ 13 ರಂದು ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ವಿಚಾರಣೆ ನವೆಂಬರ್ 14 ರಿಂದ ನವೆಂಬರ್ 18 ರವರೆಗೆ ನಡೆಯಿತು, ಇದರಲ್ಲಿ ನ್ಯಾಯಾಲಯವು ಎರಡೂ ಪಕ್ಷಗಳ ಸಾಕ್ಷ್ಯವನ್ನು ಆಲಿಸಿತು.


ಶುಕ್ರವಾರ (ನವೆಂಬರ್ 22) ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಮ್‌ಕಿಶೋರ್ ಶುಕ್ಲಾ ಅವರು ಕಬ್ರೈ ನಿವಾಸಿ ಕರಣ್ ಅಹಿರ್ಬಾರ್ ಅಪ್ರಾಪ್ತ ವಯಸ್ಕನನ್ನು ಅತ್ಯಾಚಾರ ಎಸಗಿದ ತಪ್ಪಿತಸ್ಥರೆಂದು ಸಾಬೀತಾಗಿತ್ತು, ಸಂತ್ರಸ್ತೆಯ ಪರವಾಗಿ ತನ್ನ ತೀರ್ಪನ್ನು ಪ್ರಕಟಿಸಿದರು. ಕರಣ್ ಅವರಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ.



ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯವು ಕೇವಲ ಒಂಬತ್ತು ದಿನಗಳಲ್ಲಿ ತೀರ್ಪು ನೀಡಿದ್ದು ಇದೇ ಮೊದಲು.