ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿ (Terror attack) ನಡೆದಿದೆ. ನಗರದ ಲಾಲ್ ಚೌಕ್ ನಲ್ಲಿ ಬಿಜೆಪಿ ಮುಖಂಡ ಗುಲಾಂ ರಸೂಲ್ ದಾರ್ (Gulam Rasool Dar), ಮತ್ತು ಅವರ ಪತ್ನಿ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. 
 
ಕುಲ್ಗಾಂ ಕಿಸಾನ್ ಮೋರ್ಚಾ ಅಧ್ಯಕ್ಷನ ಹತ್ಯೆ : 
ಜಮ್ಮು ಮತ್ತು ಕಾಶ್ಮೀರದ (Jammu Kashmir) ಅನಂತನಾಗ್ ಜಿಲ್ಲೆಯಲ್ಲಿ, ಭಯೋತ್ಪಾದಕರು ಸೋಮವಾರ ಭಾರತೀಯ ಜನತಾ ಪಕ್ಷ (BJP) ನಾಯಕ ಮತ್ತು ಅವರ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್‌ ಪ್ರದೇಶದ ಸರ್ ಪಂಚ್ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಕುಲ್ಗಾಮ್ ಜಿಲ್ಲಾ ಘಟಕದ ಅಧ್ಯಕ್ಷ ಗುಲಾಂ ರಸೂಲ್ ದಾರ್ (Gulam Rasool Dar) ಮತ್ತು ಅವರ ಪತ್ನಿ ಮೇಲೆ ಭಯೋತ್ಪಾದಕರು ಗುಂಡಿನ (Terror attack) ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Assam Land Dispute: ಈ ರಾಜ್ಯಗಳಲ್ಲಿ ತಲೆದೋರಿತು ತೈಲ ಸಮಸ್ಯೆ : ಬೈಕ್ ಗೆ ಸಿಗಲಿದೆ ಕೇವಲ 5 ಲೀ. ಪೆಟ್ರೋಲ್


COMMERCIAL BREAK
SCROLL TO CONTINUE READING

ಜಿಲ್ಲಾ ವಿಕಾಸ್ ಪರಿಷತ್ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು : 
ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆಯೇ ಇಬ್ಬರು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಕುಲ್ಗಾಂನ ರೆಡ್ವಾನಿ ನಿವಾಸಿಯಾದ ದಾರ್, ಬಿಜೆಪಿ (BJP) ಬೆಂಬಲಿತ ಸರ್ಪಂಚ್ ಆಗಿದ್ದರು. ಅವರು ಕಳೆದ ವರ್ಷ ಜಿಲ್ಲಾ ಕಾಸ್ ಪರಿಷತ್ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು. ಆದರೆ ಆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ದಾರ್ ಅನಂತನಾಗ್‌ನಲ್ಲಿ (Ananthnag) ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.


ಇದನ್ನೂ ಓದಿ : Free Ration : ಕೋವಿಡ್ ಸಮಯದಲ್ಲಿ 80 ಕೋಟಿ ಭಾರತೀಯರಿಗೆ 'ಉಚಿತ ಪಡಿತರ' : ಪ್ರಧಾನಿ ಮೋದಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ