ಬೆಂಗಳೂರು: ಕಳೆದ 11 ಚುನಾವಣೆಯಲ್ಲಿ ಭಾರೀ ಗೆಲುವು ಸಾಧಿಸಿ ಸೋಲಿಲ್ಲದ ಸರದಾರ ಎಂದೇ ಹೆಸರಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್'ನಿಂದ ಬಂಡಾಯವೆದ್ದು ಬಿಜೆಪಿ ಸೇರಿ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಡಾ. ಉಮೇಶ್‌ ಜಾಧವ್‌ 61,5894 ಮತಗಳನ್ನು ಗಳಿಸಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ 52, 0726 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಈ ಮೂಲಕ ಇದುವರೆಗೂ ಕಲ್ಬುರ್ಗಿಯಲ್ಲಿದ್ದ ಕಾಂಗ್ರೆಸ್ ಅಲೆ, ಮೋದಿ ಕಡೆಗೆ ಮುಖ ಮಾಡಿದೆ.


2014ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿಯ ರೇವೂ ನಾಯಕ್ ಬೆಳಮಗಿ ಅವರನ್ನು 74,733 ಮತಗಳಿಂದ ಸೋಲಿಸಿದ್ದರು. 1972 ರಿಂದ 2009ರವರೆಗೂ ಸತತವಾಗಿ ಚುನಾವಣೆಗಳಲ್ಲಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು.