ನವದೆಹಲಿ : ಕನ್ನಡಿಗನ ಪದಗ್ರಹಣ ಸಮಾರಂಭ ಎಐಸಿಸಿ ಕಚೇರಿ ಆವರಣದಲ್ಲಿ ಅದ್ಧೂರಿಯಾಗಿ ನಡೆಯಿತು. ದೆಹಲಿಯ ಎಐಸಿಸಿ ಕಚೇರಿ ಆವರಣದಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಅಧ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭಾಗಿಯಾಗಿದ್ದರು. ಪದಗ್ರಹಣಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತನಿಗೆ ಖರ್ಗೆ ನಮನ ಸಲ್ಲಿಸಿದರು. ಬಳಿಕ ನೆಹರು, ಇಂದಿರಾಗಾಂಧಿ ಹಾಗು ರಾಜೀವ್ ಗಾಂಧಿ ಘಾಟ್ ಗಳಿಗೆ ತೆರಳಿ ನಮನ ಸಲ್ಲಿಸಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಸಂಸದ ಶಶಿ ತರೂರ್ ಅವರನ್ನ ಅಧ್ಯಕ್ಷ ಚುನಾವಣೆಯಲ್ಲಿ ಮಣಿಸಿದ್ದು, ಕಾಂಗ್ರೆಸ್ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Mallikarjun Kharge : ಇಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ


ಕರ್ನಾಟಕ ಕಾಂಗ್ರೆಸ್ಸಿಗರ ದಂಡು ದೆಹಲಿಯಲ್ಲಿ : 


ಖರ್ಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕರ್ನಾಟಕದ ಕಾಂಗ್ರೆಸ್‌ ನಾಯಕರ ದಂಡು ದೆಹಲಿಯಲ್ಲಿ ಬೀಡುಬಿಟ್ಟಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿತ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ದ ಹಲವು ಹಿರಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದರು. ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಗಾಂಧಿ ಕುಟುಂಬಕ್ಕೆ ನಿಕಟವರ್ತಿಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವರ ಗೆಲುವು ಕೈ ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ. ಅವರಿಗೆ ರಾಹುಲ್, ಸೋನಿಯಾ ಮತ್ತು ಪ್ರಿಯಾಂಕಾ ಬೆಂಬಲವಿದೆ ಎಂದು ಹೇಳಲಾಗುತ್ತಿದೆ. ಖರ್ಗೆ ಅವರಲ್ಲದೆ, ತಿರುವನಂತಪುರಂನ ಲೋಕಸಭಾ ಸದಸ್ಯರಾದ ಶಶಿ ತರೂರ್ ಮತ್ತು ಜಾರ್ಖಂಡ್ ಮಾಜಿ ಸಚಿವ ಕೆ. ಎನ್. ತ್ರಿಪಾಠಿ ಕೂಡ ಈ ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇವರನ್ನು ಹಿಂದಿಕ್ಕಿ ಖರ್ಗೆ ಕೈ ಅಧ್ಯಕ್ಷ ಪಟ್ಟವನ್ನು ಪಡೆದರು.


51 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ದಲಿತ ಅಧ್ಯಕ್ಷ!


ಖರ್ಗೆ ಅವರು ದಕ್ಷಿಣ ಭಾರತದಿಂದ (ಕರ್ನಾಟಕ) ಬಂದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರ ಈ ಆಯ್ಕೆಯಿಂದ 51 ವರ್ಷಗಳ ನಂತರ ಕಾಂಗ್ರೆಸ್‌ಗೆ ದಲಿತ ಅಧ್ಯಕ್ಷರೊಬ್ಬರು ಸಿಕ್ಕಂತಾಗಿದೆ. ಬಾಬು ಜಗಜೀವನ್ ರಾಮ್ ನಂತರ ಯಾವ ದಲಿತ ನಾಯಕರೂ ಪಕ್ಷವನ್ನು ಮುನ್ನಡೆಸಿಲ್ಲ. 


ಇದನ್ನೂ ಓದಿ : ಇಂಗ್ಲಿಷ್ ಮಾಸ್ಟರ್ ಖ್ಯಾತಿಯ ಗುಡಿಬಂಡೆ ಜಗನ್ನಾಥ್ ಇನ್ನಿಲ್ಲ


ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ದೇಶದ ಶೇ 22ರಷ್ಟು ದಲಿತರನ್ನು ಕಾಂಗ್ರೆಸ್ ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ಹೆಣೆಯಲಿದೆ. ಇದರೊಂದಿಗೆ ಪಕ್ಷವು ದಕ್ಷಿಣಕ್ಕೆ ತಲುಪಲು ಪ್ರಯತ್ನಿಸಲಿದೆ. ಇತರ ಪಕ್ಷಗಳೊಂದಿಗೆ ಸಂವಹನ ನಡೆಸಲು ಅವರ ಸುದೀರ್ಘ ಅನುಭವವು ಸೂಕ್ತವಾಗಲಿದೆ.


ಮನಮೋಹನ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದ ಖರ್ಗೆ : 


2005 ರಿಂದ 2008 ರವರೆಗೆ ಖರ್ಗೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಅವರು ರೈಲ್ವೆ ಸಚಿವಾಲಯ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್‌ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.