ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಖರ್ಗೆ
ಮಹಾರಾಷ್ಟ್ರ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಕಚೇರಿಯಲ್ಲಿಂದು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಜವಾಬ್ದಾರಿ ವಹಿಸಿದ್ದಾರೆ. ನಾನು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.
ಚುನಾವಣಾ ದೃಷ್ಠಿಯಿಂದ ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಗಮನ ಹರಿಸಲಾಗುವುದು. ಈ ಹಿಂದೆಯೂ ನಾಲ್ಕು ಮ್ಬರಿ ಮಹಾರಾಷ್ಟ್ರದಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ರಾಜ್ಯದ ಎಲ್ಲಾ ನಾಯಕರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನ ಮಾಡಲಾಗುವುದು ಎಂದು ಖರ್ಗೆ ತಿಳಿಸಿದರು.