ಕೋಲ್ಕತ್ತ : ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಭವಾನಿಪುರ ಶಾಸಕ ಶೋಭನ್‌ದೇವ್ ಚಟ್ಟೋಪಾಧ್ಯಾಯ(Sobhandeb Chattopadhya) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ' ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್ಪಾಲ್ ನಿರ್ದೋಷಿ ಎಂದ ಗೋವಾ ಕೋರ್ಟ್
ಇತ್ತೀಚಿಗೆ ನಡೆದೆ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ(Mamata Banerjee) ನಂದಿಗ್ರಾಮ ಮತ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ದೀದಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯ ಬೇಕಾದರೆ, ಆರು ತಿಂಗಳೊಳಗೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭನ್‌ದೇವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ.
West Bengal | TMC's Sovandeb Chatterjee resigns as MLA from Bhawanipore
"I have enquired from him if he has resigned voluntarily and without coercion. I am satisfied, and I have accepted his resignation," says West Bengal Assembly Speaker Biman Banerjee pic.twitter.com/qJtScYHUnO
— ANI (@ANI) May 21, 2021
ಇದನ್ನೂ ಓದಿ : Sundarlal Bahuguna : ಚಿಪ್ಕೋ ಚಳುವಳಿಯ ರೂವಾರಿ 'ಸುಂದರ್ ಲಾಲ್ ಬಹುಗುಣ' ಬಲಿ ಪಡೆದ ಕೊರೋನಾ!
ಈ ಬಗ್ಗೆ ಪ್ರತಿಕ್ರಿಯಿಸಿದ ಚಟ್ಟೋಪಾಧ್ಯಾಯ, ಇದು ಪಕ್ಷದ ನಿರ್ಧಾರವಾಗಿದೆ. ನಾನು ಅದನ್ನು ಸಂತಸದಿಂದ ಪಾಲಿಸುತ್ತೇನೆ. ಭವಾನಿಪುರ ಕ್ಷೇತ್ರ(Bhabanipur constituency)ದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Madhya Pradesh Govt : 'ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.