ಕೋಲ್ಕತಾ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಪ್ರಿಲ್ 4ರಿಂದ ಚುನಾವಣಾ ಪ್ರಚಾರ ಕೈಗೊಳ್ಳಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ರಾಜ್ಯಾದ್ಯಂತ 14 ದಿನಗಳಲ್ಲಿ ಸುಮಾರು 100 ರ‍್ಯಾಲಿ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

"ಎಪ್ರಿಲ್ 4 ರಿಂದ ಎಪ್ರಿಲ್ 17ರವರೆಗೆ ನಾನು ಚುನಾವಣಾ ಪ್ರಚಾರ ನಡೆಸಲಿದ್ದೇನೆ. ಈ ವೇಳೆ ಸುಮಾರು 100 ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದೇನೆ. ಅಸ್ಸಾಂ ನಲ್ಲೂ ಕೂಡ ರ‍್ಯಾಲಿಗಳನ್ನು ನಡೆಸಲಾಗುವುದು" ಎಂದು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಮತಾ ಬ್ಯಾನರ್ಜಿ ಹೇಳಿದರು.


ಮಾರ್ಚ್ 31ರಂದು ತಾವು ಆಂಧ್ರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಆಂಧ್ರದ ಆಡಳಿತಾರೂಢ ತೆಲುಗು ದೇಶಂ ಪಕ್ಷದ ಪರವಾಗಿ ಪ್ರಚಾರ ಮಾಡುವುದಾಗಿ ಮಮತಾ ಬ್ಯಾನರ್ಜಿ ಇದೇ ವೇಳೆ ತಿಳಿಸಿದರು.


ರಾಜ್ಯದ 42 ಲೋಕಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 2 ರ‍್ಯಾಲಿಯಲ್ಲಿ ಮಮತಾ ಪಾಲ್ಗೊಳ್ಳಲಿದ್ದಾರೆ ಎಂದು ಟಿಎಂಸಿ ಪಕ್ಷದ ಮೂಲಗಳು ತಿಳಿಸಿವೆ.