ಸೆ.18ರಂದು ಮಮತಾ ಬ್ಯಾನರ್ಜಿಯಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲು ಮಮತಾ ಬ್ಯಾನರ್ಜಿ ನವದೆಹಲಿಗೆ ತೆರಳಲಿದ್ದಾರೆ.

Updated: Sep 16, 2019 , 07:17 PM IST
ಸೆ.18ರಂದು ಮಮತಾ ಬ್ಯಾನರ್ಜಿಯಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ಕೊಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲು ಮಂಗಳವಾರ ನವದೆಹಲಿಗೆ ತೆರಳಲಿರುವ ಮಮತಾ ಬ್ಯಾನರ್ಜಿ, ಪ್ರಧಾನಿಯನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸಚಿವಾಲಯದ ಮೂಲಗಳು ತಿಳಿಸಿವೆ. 

ಬಹು ಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಸಿಬಿಐ ಪ್ರಶ್ನಿಸುತ್ತಿರುವ ಸಂದರ್ಭದಲ್ಲೇ ಮಮತಾ ಪ್ರಧಾನಿ ಮೋದಿ ಭೇಟಿಗೆ ಮುಂದಾಗಿದ್ದಾರೆ.